ಬಿಡಿಸಿಸಿ ಅಂಡ್ ಐ ಬ್ಯುಸಿನೆಸ್ ಅವಾರ್ಡ-2025’ ಆರು ಸಾಧಕರಿಗೆ ಪ್ರಶಸ್ತಿ ಪ್ರದಾನ
BDCC & I Business Awards-2025 presented to six achievers
ಬಿಡಿಸಿಸಿ ಅಂಡ್ ಐ ಬ್ಯುಸಿನೆಸ್ ಅವಾರ್ಡ-2025’ ಆರು ಸಾಧಕರಿಗೆ ಪ್ರಶಸ್ತಿ ಪ್ರದಾನ
ಬಳ್ಳಾರಿ 26: ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯು ನೀಡುತ್ತಿರುವ ‘ಬಿಡಿಸಿಸಿ ಅಂಡ್ ಐ ಬ್ಯುಸಿನೆಸ್ ಅವಾರ್ಡ-2025’ ಪ್ರಶಸ್ತಿಗಳನ್ನು ಆರು ಸಾಧಕರಿಗೆ ಭಾನುವಾರ ಪ್ರದಾನ ಮಾಡಿ, ಗೌರವಿಸಿ ಅಭಿನಂದಿಸಲಾಯಿತು. ಬಳಾರಿಯ ಬಲಿಜ ಭವನದಲ್ಲಿ ಭಾನುವಾರ ನಡೆದ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ 72ನೇ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಸೇವೆ ಸಲ್ಲಿಸಿರುವ ಡಾ. ಯಶವಂತ ಭೂಪಾಲ್ ಅವರಿಗೆ ‘ಜೀವಮಾನ ಸಾಧನೆ’, ಸೇವಾ ಕ್ಷೇತ್ರದಲ್ಲಿರುವ ಡಾ. ನಾಗರತ್ನ ಅನ್ನಾವರ್ಜುಲ (ಡಾ. ರತ್ನಾ ಸುಯಜ್ಞ) ಅವರಿಗೆ ‘ಸೇವಾ ರತ್ನ’, ಕೈಗಾರಿಕಾ ಕ್ಷೇತ್ರದಲ್ಲಿ ಸಿರುಗುಪ್ಪದ ಶ್ರೀಮತಿ ವಾಸವಿ ವೆಂಕಣ್ಣ ಅವರಿಗೆ, ಕೃಷಿ ಉತ್ಪನ್ನಗಳು ಮತ್ತು ಮಾರಾಟ ಕ್ಷೇತ್ರದಲ್ಲಿ ಚಾಣಕನೂರು ಮರೇಗೌಡ, ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ಎಚ್. ತಿಮ್ಮನಗೌಡ ಮತ್ತು ಕಂಪ್ಲಿಯ ವೆಂಕಟೇಶ್ ಎಣ್ಣಿ ಅವರಿಗೆ ‘ವಾಣಿಜ್ಯ ರತ್ನ’ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಯಶವಂತರಾಜ್ ನಾಗಿರೆಡ್ಡಿ ಅವರು, 2024-25ರ ಸಾಲಿನ ಸಂಸ್ಥೆಯ ಪ್ರಗತಿ ಪಕ್ಷಿನೋಟವನ್ನು ಸಭೆಯಲ್ಲಿ ಮಂಡಿಸಿ, 2024-25ರ ಆರ್ಥಿಕ ಲೆಕ್ಕಪರಿಶೋಧನಾ ವರದಿಯನ್ನು ಮಂಡನೆ ಮಾಡಿ, ಅನುಮೋದನೆ ಪಡೆದರು. ‘ವಾಣಿಜ್ಯ ರತ್ನ’ ಪ್ರಶಸ್ತಿ ಸ್ವೀಕರಿಸಿದ ಶ್ರೀಮತಿ ವಾಸವಿ ವೆಂಕಣ್ಣ ಅವರು, ಸಿರುಗುಪ್ಪದಲ್ಲಿ ರೈಸ್‌ಮಿಲ್‌ಗಳನ್ನು ನಡೆಸುತ್ತಿರುವ ನನ್ನನ್ನು ಗುರುತಿಸಿ, ಪ್ರಶಸ್ತಿ ನೀಡಿದ್ದಕ್ಕಾಗಿ ಸಂಸ್ಥೆಗೆ ನಾನು ಅಭಾರಿಯಾಗಿದ್ದೇನೆ. ಜಿಲ್ಲೆಯಲ್ಲಿ ಮಹಿಳಾ ಉದ್ಯಮಿಗಳಿಗೆ ಉತ್ತಮ ಅವಕಾಶಗಳಿವೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯಮಗಳನ್ನು ಪ್ರಾರಂಭಿಸಬೇಕು ಎಂದು ಹೇಳಿದರು. 2024-25ರ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ರ್ಯಾಂಕ್‌ಗಳನ್ನು ಪಡೆದಿರುವ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಿ, ಅಭಿನಂದಿಸಲಾಯಿತು. ಸಂಸ್ಥೆಯ ಸಂಸ್ಥಾಪಕರನ್ನು ಸ್ಮರಿಸಲಾಯಿತು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಅವ್ವಾರು ಮಂಜುನಾಥ್ ಅವರು ಸ್ವಾಗತ ಕೋರಿದರು. ಎಚ್.ಎ. ದಕ್ಷಿಣಾಮೂರ್ತಿ ಅವರು ಕಾರ್ಯಕ್ರಮ ನಿರೂಪಿಸಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ಕೆ.ಸಿ. ಸುರೇಶಬಾಬು ಅವರು ವಂದನಾರೆ್ಣ ಸಲ್ಲಿಸಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಬಿ. ಮಹಾರುದ್ರಗೌಡ, ಉಪಾಧ್ಯಕ್ಷರುಗಳಾದ ಎಸ್. ದೊಡ್ಡನಗೌಡ, ಸೊಂತ ಗಿರಿಧರ್, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೆಡ್ ಮಲ್ಲಿಕಾರ್ಜುನಗೌಡ, ವಿ. ರಾಮಚಂದ್ರ, ಖಜಾಂಚಿಗಳಾದ ಪಿ. ಪಾಲಣ್ಣ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 