ಬಳ್ಳಾರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಡಿಸಿಸಿಐ ಪ್ರಯತ್ನ
BDCCI's efforts for the all-round development of Bellary district
ಬಳ್ಳಾರಿ 22: ಬಳ್ಳಾರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಮತ್ತು ಮೂಲಭೂತ ಸೌಲಭ್ಯಗಳನ್ನು ಒದಗಿಸಲಿಕ್ಕಾಗಿ ಸಂಸದ ಈ. ತುಕಾರಾಂ ಅವರ ನೇತೃತ್ವದಲ್ಲಿ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಮತ್ತು ತೆರಿಗೆ ಸಮಿತಿ ಅಧ್ಯಕ್ಷ ಸಿಎ ಕೆ. ರಾಜಶೇಖರ್ ಅವರು ಕೇಂದ್ರ ಸರ್ಕಾರದ ವಿವಿಧ ಸಚಿವರನ್ನು - ಹಿರಿಯ ಅಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ, ಮನವಿ ಸಲ್ಲಿಸಿ ಈ ಕುರಿತು ಚರ್ಚೆ ನಡೆಸಿದ್ದಾರೆ.
ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ ಅವರನ್ನು ಭೇಟಿ ಮಾಡಿ, ಬಾಂಬೆ ಮತ್ತು ಕೊಲ್ಹಾಪುರ ರೈಲು ಮಾರ್ಗವನ್ನು ಬಳ್ಳಾರಿಯವರೆಗೆ ವಿಸ್ತರಣೆ ಮಾಡುವ, ನಾಗರಿಕ ವಿಮಾನಯಾನ ಸಚಿವ ರಾಂಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿ ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮತ್ತು ಪರಿಸರ ನಿಯಂತ್ರಣ ಮಂಡಲಿಯ ಅಧಿಕಾರಿಗಳನ್ನು ಭೇಟಿ ಮಾಡಿ ಕುಡತಿನಿ ಕೈಗಾರಿಕಾ ಪ್ರದೇಶಕ್ಕೆ ಪರಿಸರ ಇಲಾಖೆಯ ಅನುಮತಿ ನೀಡುವ ಕುರಿತು ಲಿಖಿತ ಮನವಿಯನ್ನು ಸಲ್ಲಿಸುವ ಮೂಲಕ ತ್ವರಿತವಾಗಿ ಕ್ರಮಕೈಗೊಳ್ಳಲು ಚರ್ಚೆ ನಡೆಸಿದ್ದಾರೆ.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು, ಬಳ್ಳಾರಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ, ವ್ಯಾಪಾರ - ವಾಣಿಜ್ಯ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಚಿವರು - ಅಧಿಕಾರಿಗಳನ್ನು ಭೇಟಿ ಮಾಡಿ, ಚರ್ಚೆ ನಡೆಸಿ, ತ್ವರಿತವಾಗಿ ಕ್ರಮಕೈಗೊಳ್ಳಲು ಮನವಿ ಮಾಡಲಾಗಿದೆ. ಅಲ್ಲದೇ, ಬಳ್ಳಾರಿಯಲ್ಲಿ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿ, ಜನಪ್ರಿಯರಾಗಿದ್ದ ಐಎಎಸ್ ಅಧಿಕಾರಿ ಎಸ್.ಎಸ್. ನಕುಲ್ ಮತ್ತು ಅರವಿಂದ ಶ್ರೀವಾಸ್ತವ ಅವರನ್ನೂ ಭೇಟಿ ಮಾಡಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿ ಕುರಿತು ಚರ್ಚೆ ನಡೆಸಲಾಗಿದೆ. ಸಚಿವರು ಮತ್ತು ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರದಲ್ಲೇ ನಮ್ಮ ಜನಪರವಾಗಿರುವ ಬೇಡಿಕೆಗಳು ಈಡೇರಿಸಲ್ಪಡುವ ವಿಶ್ವಾಸ ನಮಗಿದೆ ಎಂದು ವಿವರಿಸಿದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 