ಬಿಜೆಪಿಯಿಂದ ಬೃಹತ್ ಧರಣಿ ಸತ್ಯಾಗ್ರಹ 2ನೇ ದಿನ
BJP's massive sit-in enters 2nd day
ಲೋಕದರ್ಶನ ವರದಿ
ವಿಜಯಪುರ : ಸಚಿವ ಬಿ.ನಾಗೇಂದ್ರ ರಾಜೀನಾಮೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ಬಿಜೆಪಿ ನಗರದಲ್ಲಿ ನಡೆಯುತ್ತಿರುವ ಬೃಹತ್ ಧರಣಿ ಸತ್ಯಾಗ್ರಹ 2ನೇ ದಿನಕ್ಕೆ ಕಾಲಿಟ್ಟಿದೆ. ಪ್ರತಿಭಟೆಯ ನೇತೃತ್ವವನ್ನು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ, ಯುವ ಮೋರ್ಚಾ, ಅಲ್ಪಸಂಖ್ಯಾತ ಮೋರ್ಚಾ ಹಾಗೂ ವಿವಿಧ ಮೋರ್ಚಾ ನೇತೃತ್ವದಲ್ಲಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ಸಚಿವ ಬಿ.ನಾಗೇಂದ್ರ ಅವರು ಸರಿ ಇದ್ದಾರೆ, ಛಲೋ ಇದ್ದಾರೆ, ಸುದೈವ ಇದ್ದಾರೆ ಎಂದಾದರೆ ಸಿದ್ಧರಾಮಯ್ಯನವರು ಸದನದಲ್ಲಿ ಯಾಕೆ ಭ್ರಷ್ಟಾಚಾರ ಆಗಿದೆ ಎಂದು ಹೇಳಿದರು.
ಸಿದ್ಧರಾಮಯ್ಯನವರು ಸದನದಲ್ಲೆ ಒಪ್ಪಿಕೊಂಡಿದ್ದರು ವಾಲ್ಮಿಕಿ ನಿಗಮದಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಹಾಗಿದ್ದರೆ ಅವರು ಸುಳ್ಳು ಹೇಳಿದ್ದರಾ ಯಾಕೆ ಅವರು ಸದನದಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಒಪ್ಪಿಕೊಂಡು ಜನರಿಗೆ ಸುಳ್ಳು ಹೇಳಿ ಮೋಸ ಮಾಡಿದರು. ನಮಗೆ ಸಮಾಧಾನ ಮಾಡಲು ಸುಳ್ಳು ಹೇಳಿದರಾ ಸಿದ್ದರಾಮಯ್ಯನವರು ಹೇಳಿದ್ದು ಸುಳ್ಳು ಎನ್ನುವುದಾದರೆ ಅವರನ್ನು ಕಾಂಗ್ರೆಸ್ ಪಕ್ಷದಿಂದ ಕಿತ್ತು ಹೊರಗೆ ಹಾಕಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸ್ವಪ್ನಾ ಕಣಮುನಾಳ ಮಾತನಾಡಿ, ಕಾಂಗ್ರೆಸ್ ಎಂದರೆ ಪ್ರಗತಿ ಶೂನ್ಯ. ಇತ್ತೀಚಿಗೆ ನಡೆದ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಯಾವೊಬ್ಬ ಮಹಿಳೆಯರಿಗೆ ಇಲ್ಲಿಯವರೆಗೂ ಸಚಿವ ಸ್ಥಾನದ ಅವಕಾಶ ನೀಡಿದೆ ಮಹಿಳಾ ವಿರೋಧಿ ಧೋರಣೆಯನ್ನು ತೋರಿ ಮಹಿಳೆಯರಿಗೆ ಅಪಮಾನ ಮಾಡಿದ್ದಾರೆ.
ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮ ಹಗರದ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಸಚಿವ ಸ್ಥಾನದಿಂದ ಶೀಘ್ರ ವಜಾಗೊಳಿಸಬೇಕು. ರಾಜ್ಯ ಸರ್ಕಾರವನ್ನು ದೆಹಲಿ ಹೈಕಮಾಂಡ್ ನಿರ್ವಹಿಸುತ್ತಿದೆ. ಸಂಧ್ಯಾ ಸುರಕ್ಷಾ ಯೋಜನೆ, ವೃದ್ಧಾಪ್ಯ ವೇತನನಗಳು, ಮಹಿಳಿಯರಿಗೆ ವಿಧವಾ ವೇತನವನ್ನು ಸರಿಯಾಗಿ ಬಿಡುಗಡೆ ಗೊಳಿಸದೆ ಸರ್ಕಾರ ವ್ಯರ್ಥ ಕಾಲಹರಣ ಮಾಡುತ್ತಿದೆ ಎಂದು ಆರೋಪಿಸಿದರು. ಯುವ ಮೋರ್ಚಾ ಅಧ್ಯಕ್ಷ ರಾಘವೇಂದ್ರ ಕಾಪ್ಸೆ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಯುವಕರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಕಪ್ಸೆ ಆರೋಪಿಸಿದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 