ಇಂದು ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ

 ಬೆಂಗಳೂರು, ಆ 27     ರಾಜ್ಯ ಬಿಜೆಪಿ ನೂತನ ಅಧ್ಯಕ್ಷರಾದ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಪದಗ್ರಹಣ ಸಮಾರಂಭ ಮಂಗಳವಾರ ಬೆಳಗ್ಗೆ 10.30ಕ್ಕೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆಯಲಿದೆ.  ಬೆಳಗ್ಗೆ 9 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿಳಿಯಲಿರುವ ನೂತನ ಅಧ್ಯಕ್ಷರನ್ನು ಭವ್ಯ ಸ್ವಾಗತದೊಂದಿಗೆ ಬರ ಮಾಡಿಕೊಳ್ಳಲಾಗುತ್ತದೆ. ಬೆಳಗ್ಗೆ 9.30ಕ್ಕೆ ಕಾಡು ಮಲ್ಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮಂಗಳವಾದ್ಯಗಳೊಂದಿಗೆ ಅದ್ಧೂರಿಯಾಗಿ ರಾಜ್ಯ ಕಚೇರಿಗೆ ಕರೆ ತರಲಾಗುತ್ತದೆ. ಬೆಳಗ್ಗೆ 10.30ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಸಚಿವರು, ಸಂಸದರು, ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಯಡಿಯೂರಪ್ಪ ಅವರು ಕಟೀಲ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.