ಬಿಜೆಪಿ ಶಾಸಕ ಮನೋಹರ್ ಉಂತ್ವಾಲ್ ನಿಧನ

ಭೋಪಾಲ್, ಜ.30, ಮಧ್ಯಪ್ರದೇಶದ ಪ್ರತಿಪಕ್ಷ ಭಾರತೀಯ ಜನತಾ ಪಕ್ಷದ ಶಾಸಕ ಮನೋಹರ್ ಉಂತ್ವಾಲ್ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಅವರು 2018 ರಲ್ಲಿ ಅಗರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಮೆದುಳಿನ ರಕ್ತಸ್ರಾವದ ಹಿನ್ನೆಲೆಯಲ್ಲಿ ಶಾಸಕರನ್ನು ಆರಂಭದಲ್ಲಿ ಇಂದೋರ್‌ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅಲ್ಲಿಂದ ದೆಹಲಿಗೆ ಸ್ಥಳಾಂತರಿಸಲಾಗಿತ್ತು ಎಂದು ಬಿಜೆಪಿ ರಾಜ್ಯ ಮಾಧ್ಯಮ ಉಸ್ತುವಾರಿ ಎಲ್‌. ಪರಾಶರ್ ದೃಢಪಡಿಸಿದ್ದಾರೆ.  ಬಿಜೆಪಿ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಸೇರಿದಂತೆ ಹಲವು ಗಣ್ಯರು ಶಾಸಕರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.