ನವದೆಹಲಿ 20: ಶಾಲಿಮಾರ್ ಬಾಗ್ ಕ್ಷೇತ್ರದ ಬಿಜೆಪಿ ಶಾಸಕಿ ರೇಖಾ ಗುಪ್ತಾ ಅವರು ದೆಹಲಿಯ 9ನೇ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ರಾಮಲೀಲಾ ಮೈದಾನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
ರೇಖಾ ಗುಪ್ತಾ ಅವರ ಜೊತೆಗೆ ಹೊಸದಾಗಿ ಆಯ್ಕೆಯಾದ ಆರು ಶಾಸಕರು - ಪರ್ವೇಶ್ ವರ್ಮಾ, ಆಶಿಶ್ ಸೂದ್, ಪಂಕಜ್ ಸಿಂಗ್, ಮಂಜಿಂದರ್ ಸಿಂಗ್ ಸಿರ್ಸಾ, ಕಪಿಲ್ ಮಿಶ್ರಾ ಮತ್ತು ರವೀಂದರ್ ಇಂದ್ರಜ್ ಅವರು ಸಹ ನೂತನ ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಈ ಮೂಲಕ ದೆಹಲಿಯಲ್ಲಿ ನಾಲ್ಕನೇ ಬಾರಿಗೆ ಮಹಿಳಾ ಶಾಸಕರೊಬ್ಬರು ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಬಿಜೆಪಿಯಿಂದ ಸುಷ್ಮಾ ಸ್ವರಾಜ್, ಕಾಂಗ್ರೆಸ್ ನಿಂದ ಶೀಲಾ ದೀಕ್ಷಿತ್, ಆಮ್ ಆದ್ಮಿ ಪಾರ್ಟಿಯಿಂದ ಆತಿಶಿ ದೆಹಲಿಯ ಮುಖ್ಯಮಂತ್ರಿಯಾಗಿದ್ದರು.