ನವದೆಹಲಿ, ಜ 25 ,ದೆಹಲಿ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆದಿರುವ ಬೆನ್ನಲ್ಲೇ ಇಲ್ಲಿನ ಹರಿನಗರ ವಿಧಾನಸಭಾ ಕ್ಷೇತ್ರದ ನಾಲ್ಕು ಬಾರಿ ಬಿಜೆಪಿ ಶಾಸಕ ಹರ್ಷವರ್ಧನ್ ಸಿಂಗ್ ಬಲ್ಲಿ ಶನಿವಾರ ಆಮ್ ಆದ್ಮಿ ಪಕ್ಷ ಸೇರ್ಪಡೆಯಾದರು. ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಯೋಜಕ ಅರವಿಂದ ಕೇಜ್ರಿವಾಲ್ ಉಪಸ್ಥಿತಿಯಲ್ಲಿ ಹರ್ಷವರ್ಧನ್ ಪಕ್ಷ ಸೇರ್ಪಡೆಯಾದರು. ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯ ಉಪಸ್ಥಿತರಿದ್ದರು. ಫೆ. 8ರಂದು ದೆಹಲಿ ಚುನಾವಣೆ ನಡೆಯಲಿದ್ದು, ಫೆ. 11ರಂದು ಮತ ಎಣಿಕೆ ನಡೆಯಲಿದೆ. ಇಲ್ಲಿ ಎಎಪಿ, ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.