ವಿವಿಧ ಬೇಡಿಕೆಗಳನ್ನು ಈಡೇರಿಸಲು ಬಿಜೆಪಿ ಅಧ್ಯಕ್ಷ ಸಂತೋಷ ಕುರದೊಡ್ಡಿ ಮನವಿ
BJP President Santosh Kuradoddi appeals to fulfill various demands
ವಿಜಯಪುರ 24 : ಬಬಲೇಶ್ವರ ಮತ್ತು ತಿಕೋಟಾ ತಾಲೂಕುಗಳಲ್ಲಿ ಅಗತ್ಯ ಆಡಳಿತ ಇಲಾಖೆಗಳು, ನ್ಯಾಯಾಲಯ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವಂತೆ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ ಅವರಿಗೆ ಭಾರತೀಯ ಜನತಾ ಪಾರ್ಟಿ ಬಬಲೇಶ್ವರ ಮಂಡಲ ಅಧ್ಯಕ್ಷರಾದ ಸಂತೋಷ ಕುರದಡ್ಡಿ ಒತ್ತಾಯಿಸಿದ್ದಾರೆ.
ಈ ಕುರಿತು ಮನವಿ ಸಲ್ಲಿಸಿದ ಅವರು, ವಿಜಯಪುರ ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ಪಟ್ಟಣಗಳು ನೂತನ ತಾಲೂಕು ಕೇಂದ್ರಗಳಾಗಿ ಘೋಷಣೆಯಾಗಿದ್ದರೂ, ಅಲ್ಲಿ ಇನ್ನೂ ತಾಲೂಕು ಮಟ್ಟದ ಪೂರ್ಣ ಪ್ರಮಾಣದ ಆಡಳಿತ ವ್ಯವಸ್ಥೆ ಜಾರಿಗೆ ಬಂದಿಲ್ಲ. ಇದರಿಂದಾಗಿ ಈ ಭಾಗದ ರೈತರು ಹಾಗೂ ಸಾರ್ವಜನಿಕರು ಪ್ರತಿಯೊಂದು ಕೆಲಸಕ್ಕೂ ಜಿಲ್ಲಾ ಕೇಂದ್ರಕ್ಕೆ ಅಲೆಯುವಂತಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಈ ಬೇಡಿಕೆಗಳಾದ ತಾಲೂಕು ಮಟ್ಟದ ಕಚೇರಿಗಳು: ಬಬಲೇಶ್ವರ ಹಾಗೂ ತಿಕೋಟಾದಲ್ಲಿ ತಾಲೂಕು ಮಟ್ಟದ ಎಲ್ಲಾ ಆಡಳಿತ ಇಲಾಖೆಗಳನ್ನು ಕೂಡಲೇ ಪ್ರಾರಂಭಿಸಬೇಕು.
ಶೀತಲ ಗ್ರಹ ಬಬಲೇಶ್ವರ ಭಾಗವು ದ್ರಾಕ್ಷಿ ಬೆಳೆಗಾರರ ತವರೂರಾಗಿದ್ದು, ಇಲ್ಲಿನ ರೈತರಿಗೆ ಅನುಕೂಲವಾಗಲು ಬಬಲೇಶ್ವರದಲ್ಲಿ ಸರ್ಕಾರಿ ಸ್ವಾಮ್ಯದ 'ಕೋಲ್ಡ್ ಸ್ಟೋರೇಜ್ ಘಟಕವನ್ನು ನಿರ್ಮಿಸಬೇಕು. ಉಪನೋಂದಣಾಧಿಕಾರಿ ಕಚೇರಿ ಬಬಲೇಶ್ವರದಲ್ಲಿ ಸಬ್ ರೆಜಿಸ್ಟ್ರಾರ್ ಕಚೇರಿಯನ್ನು ಕೂಡಲೇ ಪೂರ್ಣ ಪ್ರಮಾಣದಲ್ಲಿ ಆರಂಭಿಸಿ, ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು. ಇತರೆ ಪ್ರಮುಖ ಕಚೇರಿಗಳು: ಬಬಲೇಶ್ವರ ಮತ್ತು ತಿಕೋಟಾದಲ್ಲಿ ಅಗ್ನಿಶಾಮಕ ಠಾಣೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗಳನ್ನು ತುರ್ತಾಗಿ ತೆರೆಯಬೇಕು. ನ್ಯಾಯಾಲಯ ಸ್ಥಾಪನೆ: ಬಬಲೇಶ್ವರ ಹಾಗೂ ತಿಕೋಟಾದಲ್ಲಿ ತಾಲೂಕು ಮಟ್ಟದ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 