ಬಿಜೆಪಿ ಯುವ ಮೋರ್ಚಾದಿಂದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ
BJP Youth Morcha protests against Congress
ಬೆಳಗಾವಿ 21 : ದೆಹಲಿಯಲ್ಲಿ ನಡೆದ ಎಐ ಸಮ್ಮಿತ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿನ ಕಾರ್ಯಕರ್ತರು ಏಕಾಎಕಿ ನುಗ್ಗಿ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರಿಗೆ ಅಪಮಾನ ಮಾಡಿ ಅಂತರರಾಷ್ಟ್ರೀಯ ಮಟ್ಟದ ನಾಯಕರ ವೇದಿಕೆಯಲ್ಲಿ ರಾಷ್ಟ್ರದ ಗೌರವಕ್ಕೆ ಧಕ್ಕೆ ತಂದಿರುವ ಕಾಂಗ್ರೆಸ್ ಪಕ್ಷದ ವಿರುದ್ಧ ಬೆಳಗಾವಿ ಜಿಲ್ಲಾ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ವತಿಯಿಂದ ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಪ್ರತಿಭಟನೆ ಮುಖಾಂತರ ತೆರಳಿ ಕಾಂಗ್ರೆಸ್ ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಇದೇ ವೇಳೆ ರಾಹುಲ್ ಗಾಂಧಿ ಪ್ರತಿಕೃತಿ ದಹನ ಮಾಡದಂತೆ ತಡೆ ಹಿಡಿದು ಪೋಲಿಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಈರಣ್ಣ ಅಂಗಡಿ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಮಹಾಂತೇಶ ಚಿನ್ನಪ್ಪಗೌಡ್ರ, ಪ್ರಧಾನ ಕಾರ್ಯದರ್ಶಿ ಆನಂದ ಅತ್ತುಗೋಳ, ಬಿಜೆಪಿ ಉಪಾಧ್ಯಕ್ಷ ಮಹಾಂತೇಶ ವಕ್ಕುಂದ, ಪ್ರಶಾಂತ್ ಅಮ್ಮಿನಭಾವಿ, ಪ್ರಮೋದ ನುಗ್ಗಾನಟ್ಟಿ, ಸದಾಶಿವ ಪಾಟೀಲ,ಪ್ರಸಾದ್ ದೇವರಮನಿ,ಶಿಲ್ಪಾ ಕೆಕರೆ, ಶ್ವೇತಾ ಜಗದಾಳೆ ಹಾಗೂ ಅನೇಕ ಕಾರ್ಯಕರ್ತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 