ಸಚಿವ ಬಸವರಾಜ ರಾಯರೆಡ್ಡಿ ಕ್ಷಮೆಯಾಚಿಸಲಿ ಬಿಜೆಪಿ, ಜೆಡಿಎಸ್ ಆಗ್ರಹ
BJP and JD(S) demand apology from Minister Basavaraj Rayareddy
ಯಲಬುರ್ಗಾ, ಆ.31: ಇಸ್ಲಾಂ ಹಾಗೂ ಹಿಂದೂ ಧರ್ಮದ ಕುರಿತು ಸಚಿವ ಬಸವರಾಜ ರಾಯರೆಡ್ಡಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ವಿವಾದಕ್ಕೆ ಕಾರಣವಾಗಿದ್ದು, ಸಚಿವರು ತಮ್ಮ ಹೇಳಿಕೆಯನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಪಕ್ಷದ ವಕ್ತಾರ ವೀರಣ್ಣ ಹುಬ್ಬಳ್ಳಿ ಆಗ್ರಹಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಕನೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ಬಸವರಾಜ ರಾಯರೆಡ್ಡಿ ಅವರು ಇಸ್ಲಾಂ ಧರ್ಮದಲ್ಲಿರುವ ಕೆಲವು ಗುಣಗಳನ್ನು ಉಲ್ಲೇಖಿಸಿ ಮೆಚ್ಚುಗೆ ವ್ಯಕ್ತಪಡಿಸುವುದರ ಜತೆಗೆ, ಮೆಕ್ಕಾಗೆ ಭೇಟಿ ನೀಡುವ ಬಯಕೆಯನ್ನೂ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಗೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ, ಸಚಿವರ ಹೇಳಿಕೆ ಹಿಂದೂ ಸಮಾಜದ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಆರೋ
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಮಾರುತಿ ಗೌಡ ಮಾತನಾಡಿ, ಧರ್ಮದ ವಿಚಾರದಲ್ಲಿ ರಾಜಕೀಯ ಮಾಡದೆ ಎಲ್ಲ ಧರ್ಮಗಳಿಗೂ ಗೌರವ ನೀಡಬೇಕು. ಸಚಿವರು ತಮ್ಮ ಹೇಳಿಕೆಯನ್ನು ಸ್ಪಷ್ಟಪಡಿಸಬೇಕು. ಮುಂದಿನ ದಿನಗಳಲ್ಲಿ ಹಿಂದೂ ಧರ್ಮಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳು ಎದುರಾದರೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಗ್ಗಟ್ಟಾಗಿ ಹೋರಾಟ ನಡೆಸಲಿವೆ ಎಂದು ಎಚ್ಚರಿಸಿದರು.
ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ಗುಳಗುಳಿ ಮಾತನಾಡಿ, ಸಚಿವ ರಾಯರೆಡ್ಡಿ ಅವರು ತಮ್ಮ ಹೇಳಿಕೆಯ ಕುರಿತು ಸ್ಪಷ್ಟನೆ ನೀಡಬೇಕು. ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ಉಂಟಾಗಿದ್ದರೆ ಕ್ಷಮೆಯಾಚಿಸಬೇಕು. ಇಲ್ಲವಾದರೆ ಸಚಿವ ಸಂಪುಟದಿಂದ ಹೊರಬರಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಅಮರೇಶ ಹುಬ್ಬಳ್ಳಿ, ಶರಣಪ್ಪ ರಾಮಪುರ, ಅಶೋಕ ಅರಕೇರಿ, ದೊಡ್ಡಯ್ಯ ಗುರವಿನ, ಕಳಕಪ್ಪ ತಳವಾರ, ಡಿ.ಕೆ. ಪರಶುರಾಮ್, ಕಲ್ಲಪ್ಪ ಕರಮುಡಿ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 