ಬಿಜೆಪಿ ಅಭ್ಯರ್ಥಿಗಳು ಮೇಯರ್ ಉಪಮೇಯರಾಗಿ ಆಯ್ಕೆ: ಕಾಂಗ್ರೇಸಿನವರ ಕೈವಾಡ
BJP candidates elected as mayor, deputy mayor: Congress's handiwork
ವಿಜಯಪುರ 20: ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ಜನೇವರಿ 2025 ರಂದು ನಡೆದಿದ್ದು, ಮಹಾನಗರ ಪಾಲಿಕೆ ಸದಸ್ಯರ ಸದಸ್ಯತ್ವ ರದ್ದುಗೊಳಿಸುವ ಬಗ್ಗೆ ಕಲ್ಬುರ್ಗಿ ಹೈಕೋರ್ಟದಲ್ಲಿ ಪ್ರಕರಣ ನಡೆದಿರುವ ಕಾರಣ ಮೇಯರ್ ಮತ್ತು ಉಪಮೇಯರ್ ಚುನಾವಣೆ ಫಲಿತಾಂಶ ತಡೆಹಿಡಲಾಗಿತ್ತು.
ಮುಂದೆ ಸದರ ಹೈಕೋರ್ಟದ ಆದೇಶದ ಪ್ರಕಾರ ತಡೆಹಿಡಿಯಲಾದ ಮೇಯರ್ ಮತ್ತು ಉಪಮೇಯರ್ ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ಮೇಯರ್ ಮತ್ತು ಉಪಮೇಯರ್‌ಗಾಗಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಆಯ್ಕೆ ಆಗಿರುತ್ತಾರೆ.
ಈ ಸಂದರ್ಭದಲ್ಲಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಇವರು ಇಲೇಕ್ಟ್ರಾನಿಕ್ ಮಾಧ್ಯಮಗಳಲ್ಲಿ ಉಸ್ತುವಾರಿ ಸಚಿವರಾದ ಎಂ. ಬಿ. ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯರಾದ ಸುನೀಲಗೌಡ ಪಾಟೀಲ ಇವರು ಬಿಜೆಪಿ ಪಕ್ಷದ ಅಭ್ಯರ್ಥಿಗಳು ಮೇಯರ್ ಹಾಗೂ ಉಪಮೇಯರ್ ಆಗಬಾರದೆಂದು ಬಹಳಷ್ಟು ತಮ್ಮ ಶಕ್ತಿ ಪ್ರದರ್ಶನ ತೋರಿಸಿದರು. ಆದರೆ ಬಿ.ಜೆ.ಪಿ. ಪಕ್ಷದ ಅಭ್ಯರ್ಥಿಗಳು ಆಯ್ಕೆ ಆಗಲು ಇನ್ನೊಬ್ಬ ಕಾಂಗ್ರೇಸ್ ಪಕ್ಷದ ಉಸ್ತುವಾರಿ ಸಚಿವರು ನಮ್ಮ ಸಹಾಯ ಮಾಡಿದ್ದಾರೆ ಅಂತಾ ನಗರ ಶಾಸಕರು ಮಾಧ್ಯಮಗಳಲ್ಲಿ ಹೇಳಿದ್ದಾರೆ. ಆ ಉಸ್ತುವಾರಿ ಸಚಿವರು ಯಾರು? ಸರ್ಕಾರ ಈ ವಿಷಯಕ್ಕೆ ಗಮನಕೊಟ್ಟು ಪರೀಶೀಲನೆ ಮಾಡಿ ವಿಜಯಪುರ ನಗರದ ಬಿಜೆಪಿ ಅಭ್ಯರ್ಥಿಗಳನ್ನು ಮೇಯರ್ ಮತ್ತು ಉಪಮೇಯರ್‌ರನ್ನಾಗಿ ಆಯ್ಕೆ ಮಾಡಲು ಕಾಂಗ್ರೇಸ್ ಪಕ್ಷದ ಸಚಿವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು.
ಏಕೆಂದರೆ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಇದ್ದು, ವಿಜಯಪುರ ಜಿಲ್ಲೆಯಲ್ಲಿ 6 ಕಾಂಗ್ರೇಸ್ ಶಾಸಕರು ಇದ್ದು, ಹಾಗೂ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಮೇಯರ್ ಮತ್ತು ಉಪಮೇಯರ್ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಆಗಬೇಕಾದರೆ ಇದಕ್ಕೆ ಕಾಂಗ್ರೇಸಿನವರ ಕೈವಾಡ ಇದೆ, ಬಿ.ಜೆ.ಪಿ. ಪಕ್ಷದ ಅಭ್ಯರ್ಥಿಗಳು ಆಯ್ಕೆ ಆಗಿದ್ದು ಹೇಗೆ ಸಾಧ್ಯ ಆ ಸಚಿವರು ಯಾರು? ವಿಜಯಪುರ ನಗರದಲ್ಲಿ ಎಲ್ಲವೂ ಬಿ.ಜೆ.ಪಿ. ಗಳ ಕೈಗೊಂಬೆ ಆಗಿದ್ದಾರೆ. ಇದರ ಬಗ್ಗೆ ಸೂಕ್ತ ತನಿಖೆ ಆಗಬೇಕು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 