ಬೆಳಗಾವಿ ಜಿಲ್ಲೆಯನ್ನು ಬರಪೀಡಿತವೆಂದು ಘೋಷಿಸಲು ಬಿಜೆಪಿ ಆಗ್ರಹ
BJP demands declaration of Belagavi district as drought-hit
ಬೆಳಗಾವಿ 06 : ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿ, ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಬಿಜೆಪಿ ಮುಖಂಡರ ನಿಯೋಗವು ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ನೇತೃತ್ವದಲ್ಲಿ ಮಾಜಿ ಶಾಸಕರು ಹಾಗೂ ಪಕ್ಷದ ಮುಖಂಡರು ಜಂಟಿ ಕೃಷಿ ನಿರ್ದೇಶಕ ಎಚ್.ಡಿ. ಕೊಳೇಕರ ಅವರನ್ನು ಭೇಟಿ ಮಾಡಿ, ಬರ ಪರಿಸ್ಥಿತಿಯ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಒತ್ತಾಯಿಸಿದರು. ಸಕಾಲಕ್ಕೆ ಬೀಜ ಹಾಗೂ ಗೊಬ್ಬರ ಪೂರೈಕೆ ಮಾಡಬೇಕು, ಕಳಪೆ ಬೀಜ-ಗೊಬ್ಬರ ವಿತರಣೆಯಾಗದಂತೆ ಕ್ರಮ ಕೈಗೊಳ್ಳಬೇಕು. ಮಳೆ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು. ರೈತರು ಬೆಳೆದ ಬೆಳೆಗಳಿಗೆ ಸರ್ಕಾರದಿಂದ ಬೆಂಬಲ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ಅರವಿಂದ ಪಾಟೀಲ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ ಬೂದಿಹಾಳ, ಜಿಲ್ಲಾ ಮಾಧ್ಯಮ ಪ್ರಮುಖ ಸಚಿನ್ ಕಡಿ ಸೇರಿದಂತೆ ಹಲವು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 