ಬರಪೀಡಿತ ತಾಲೂಕುಗಳ ಪಟ್ಟಿಗೆ ಜಿಲ್ಲೆ ಸೇರೆ​‍್ಡಗೆ ಬಿಜೆಪಿ ಆಗ್ರಹ

ಬರಪೀಡಿತ ತಾಲೂಕುಗಳ ಪಟ್ಟಿಗೆ ಜಿಲ್ಲೆ ಸೇರೆ​‍್ಡಗೆ ಬಿಜೆಪಿ ಆಗ್ರಹ  BJP demands inclusion of district in the list of drought-hit taluks


ಬೆಳಗಾವಿ : ಜಿಲ್ಲೆಯಲ್ಲಿ ಸಮರ​‍್ಕ ಸಮಯಕ್ಕೆ ಮಳೆಯಾಗದೆ ಬೆಳೆಗಳು ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವಂತೆ ಬಿಜೆಪಿ ಮುಖಂಡರು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರಿಗೆ ಮನವಿ ಸಲ್ಲಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ, ಜಿಲ್ಲೆಯ ರೈತರು ಮಳೆ ಕೊರತೆಯಿಂದ ಸಂಕಷ್ಟದಲ್ಲಿದ್ದರೂ ಸರ್ಕಾರ ಇತ್ತೀಚೆಗೆ ಬಿಡುಗಡೆ ಮಾಡಿದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯ ಯಾವುದೇ ತಾಲೂಕನ್ನು ಸೇರೆ​‍್ಡ ಮಾಡಿಲ್ಲ. ಇದರಿಂದ ಜಿಲ್ಲೆಯ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ್ ಮಾತನಾಡಿ, ಹಾನಿಗೊಳಗಾದ ಬೆಳೆಗಳ ಕುರಿತು ಸರ್ಕಾರಕ್ಕೆ ಮತ್ತೊಮ್ಮೆ ವರದಿ ಸಲ್ಲಿಸಿ, ಬೆಳಗಾವಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯಾಗಿ ಘೋಷಿಸುವಂತೆ ಒತ್ತಾಯಿಸಿದರು. ಸರ್ಕಾರ ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ, ಯುವರಾಜ್ ಜಾಧವ್, ಸುಭಾಷ್ ತುರಮರಿ, ಶ್ರೀಕರ ಕುಲಕರ್ಣಿ, ಉಮೇಶ್ ಪುರಿ, ಸಂತೋಷ ಹಡಪದ, ಪ್ರಮೋದ ನುಗ್ಗಾನಟ್ಟಿ, ಲಕ್ಕಪ್ಪ ಕಾರಗಿ, ಶ್ವೇತಾ ಜಗದಾಳೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.