ಶಿಷ್ಟಾಚಾರ ಉಲ್ಲಂಘನೆ ಮಾಡಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಭಾಜಪ ಆಗ್ರಹ
BJP demands to take disciplinary action against the officials who violated the code of conduct
ಶಿಷ್ಟಾಚಾರ ಉಲ್ಲಂಘನೆ ಮಾಡಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಭಾಜಪ ಆಗ್ರಹ
ಶಿಗ್ಗಾವಿ 01 : ಸ್ಥಳೀಯ ಜನಪ್ರತಿನಿಧಿಗಳನ್ನು ಕಡೆಗಣಿಸಿ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡು ಕಾಮಗಾರಿಗಳಿಗೆ ಅಡಿಗಲ್ಲು ಹಾಗೂ ಉದ್ಘಾಟನೆಯನ್ನು ಮಾಡಿ ಶಿಷ್ಟಾಚಾರ ಉಲ್ಲಂಘನೆ ಮಾಡುತ್ತಿರುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಭಾಜಫ ಮಂಡಲ ಅಧ್ಯಕ್ಷ ವಿಶ್ವನಾಥ ಹರವಿ ನೇತೃತ್ವದಲ್ಲಿ ಭಾಜಪ ಮುಖಂಡರು ತಾಲೂಕ ಪಂಚಾಯತ ಕಾರ್ಯಾಲಯಕ್ಕೆ ಬೀಗ ಹಾಕಿ ಪ್ರತಿಭಟನೆ ಮಾಡಿದರು. ಪಟ್ಟಣದ ತಾಲೂಕ ಪಂಚಾಯತ ಕಾರ್ಯಾಲಯಕ್ಕೆ ಬೀಗ ಹಾಕುವುದು ಇದು ಎರಡನೇಯ ಭಾರಿ ಪ್ರಥಮ ಭಾರಿ ಬನ್ನೂರ ಹಾಗೂ ಹಳೆ ಬಂಕಾಪೂರ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನೆಯನ್ನು ಮಾಡಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕೈಗೊಳ್ಳಲು ದಿ: 15-2-25 ರಂದು ಮನವಿ ನೀಡಿದ್ದರು
ಸಹಿತ ಪುನಃ ಇಂದು ಎಸ್.ಸಿ.ಪಿ ಯೋಜನೆಯಡಿ ಸರಕಾರಿ ಮೆಟ್ರಿಕ್ ನಂತರ ವೃತ್ತಿಪರ ಬಾಲಕರ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಲಯ 6.50 ಲಕ್ಷದ ಅನುಧಾನದಡಿಯಲ್ಲಿ ಕಟ್ಟಡ ನಿರ್ಮಾಣ ಭೂಮಿ ಪೂಜಾ ಕಾರ್ಯಕ್ರಮ ಶಿಷ್ಟಾಚಾರ ಪಾಲನೆ ಮಾಡದೇ ಅದೇ ತಪ್ಪು ಮಾಡಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣಿಕರ್ತರಾಗಿದ್ದಾರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ತಾಲೂಕ ಭಾಜಪ ಮಂಡಲ ಆಗ್ರಹಿಸಿದೆ. ಈ ಸಂದರ್ಭದಲ್ಲಿ ನಿಕಟಪೂರ್ವ ಅದ್ಯಕ್ಷ ಶಿವಾನಂದ ಮ್ಯಾಗೇರಿ, ಯುವಮೋರ್ಚಾ ರಾಜ್ಯ ಸಮಿತಿ ಸದಸ್ಯ ನರಹರಿ ಕಟ್ಟಿ, ಪುರಸಭೆ ಸದಸ್ಯ ಮಂಜುನಾಥ ಬ್ಯಾಹಟ್ಟಿ, ಕಾರ್ಯದರ್ಶಿ ರೇಣುಕನಗೌಡ ಪಾಟೀಲ, ಸಂತೋಷ ದೊಡ್ಡಮನಿ, ಪ್ರತೀಕ ಕೊಳೇಕರ, ಸಚಿನ ಮಡಿವಾಳರ, ಅನಿಲ ಸಾತಣ್ಣವರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 