ಕೊರೊನಾವೈರಸ್‍ ಹಿಮ್ಮೆಟ್ಟಲು ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ನಾಯಕಿ!

ಬಲರಾಮ್‍ಪುರ, ಏಪ್ರಿಲ್ 6, ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ 9 ಗಂಟೆಗೆ ಒಂಬತ್ತು ನಿಮಿಷಗಳ ಕಾಲ ದೀಪ ಬೆಳಗಿಸಲು ಬೆಳಕಿಗೆ ಕರೆ ನೀಡಿದ್ದ ವೇಳೆ ಉತ್ತರ ಪ್ರದೇಶದ ಈ ಜಿಲ್ಲೆಯ ಬಿಜೆಪಿ ಹಿರಿಯ ನಾಯಕಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜು ತಿವಾರಿ  ತಮ್ಮ ನಿವಾಸದಲ್ಲಿ ಭಾನುವಾರ ರಾತ್ರಿ ದೀಪ ಹಚ್ಚಿದ ನಂತರ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಘಟನೆಯ ವಿಡಿಯೋವನ್ನು ಸ್ವತಃ ಆಕೆಯೇ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಾರೆ ಎಂದು ಪೊಲೀಸರು  ಸೋಮವಾರ ತಿಳಿಸಿದ್ದಾರೆ. ಮಂಜು ತಿವಾರಿ ತಮ್ಮ ಪತಿ ಓಂ ಪ್ರಕಾಶ್ ತಿವಾರಿಯ ಪರವಾನಗಿ ಹೊಂದಿದ್ದ ರಿವಾಲ್ವರ್ ನಿಂದ ಗಾಳಿಯಲ್ಲಿ ಗುಂಡು ಹಾರಿಸಿ  ಕೊರೊನಾವೈರಸ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ‘ದೀಪ ಬೆಳಗಿಸಿದ ನಂತರ ಕೊರೊನಾವೈರಸ್‍ ಹಿಮ್ಮೆಟ್ಟಿಸಲು  ಗುಂಡು ಹಾರಿಸಿದ್ದೇನೆ.’  ಎಂದು ಹೇಳಿರುವ ವಿಡಿಯೋವನ್ನು ಮಂಜು ತಿವಾರಿ ಫೇಸ್‍ಬುಕ್‍ನಲ್ಲಿ ವಿಡಿಯೊನಲ್ಲಿ ಅಪ್ಲೋಡ್ ಮಾಡಿದ್ದಾರೆ.
ವಿರುದ್ಧ ಸಂಬಂಧಿತ ಕಾಯ್ದೆಯಡಿ ಬಿಜೆಪಿ ನಾಯಕಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಮಧ್ಯೆ, ಉತ್ತರ ಪ್ರದೇಶ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಜಯ್ ಕುಮಾರ್ ಘಟನೆಯ ಬಗ್ಗೆ ರಾಜ್ಯದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಲಾಕ್ ಡೌನ್ ನಿಯಮಗಳನ್ನು ಉಲ್ಲಂಘಿಸುವಲ್ಲಿ ಬಿಜೆಪಿ ನಾಯಕರು ಮತ್ತು ಕಾರ್ಮಿಕರು ಎಲ್ಲರಿಗಿಂತ ಮುಂದಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.