ಬಿ. ನಾಗೇಂದ್ರಗೆ ಸಚಿವ ಸ್ಥಾನ ವಿರೋಧಿಸಿ ಬೆಳಗಾವಿಯಲ್ಲಿ ಬಿಜೆಪಿ ಆಕ್ರೋಶ
BJP in Belagavi expresses outrage over B. Nagendra's ministerial appointment
ಬೆಳಗಾವಿ 04: ‘ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದಲ್ಲಿ ಭಾಗಿಯಾಗಿದ್ದ ಶಾಸಕ ಬಿ.ನಾಗೇಂದ್ರ ಅವರಿಗೆ ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಸ್ಥಾನ ನೀಡಿರುವುದು ಸರಿಯಲ್ಲ’ ಎಂದು ಆರೋಪಿಸಿ, ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು, ಕಾಂಗ್ರೆಸ್ ಸರ್ಆರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ‘ಇದು ಭ್ರಷ್ಟ ಕಾಂಗ್ರೆಸ್ ಸರ್ಕಾರ’ ಎಂದು ದೂರಿದರು. ನಾಗೇಂದ್ರ ಅವರ ಭಾವಚಿತ್ರವಿರುವ ಕರಪತ್ರ ಸುಟ್ಟುಹಾಕಿದರು. ‘ಕಾಂಗ್ರೆಸ್ನಲ್ಲೇ ಹಲವು ದಶಕಗಳಿಂದ ದುಡಿಯುತ್ತಿರುವ ಹಿರಿಯ ಶಾಸಕರಿದ್ದಾರೆ.
ಅಂಥವರಿಗೆ ಸಂಪುಟದಲ್ಲಿ ಸ್ಥಾನ ಕೊಡಬಹುದಿತ್ತು. ಆದರೆ, ಅವರನ್ನು ಬದಿಗೊತ್ತಿ ಭ್ರಷ್ಟರಿಗೆ ಮಣೆ ಹಾಕಲಾಗಿದೆ’ ಎಂದು ಆರೋಪಿಸಿದರು. ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಭಾಗಿಯಾದ ಕಾರಣಮ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನೂ ಕೊಟ್ಟಿದ್ದರು. ಈಗ ಮತ್ತೆ ಅವರನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದು ಎಷ್ಟರಮಟ್ಟಿಗೆ ಸರಿ’ ಎಂದು ಪ್ರಶ್ನಿಸಿದರು.ಪಕ್ಷದ ಬೆಳಗಾವಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಮಹಾನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ಅರವಿಂದ ಪಾಟೀಲ, ಡಾ.ವಿಶ್ವನಾಥ ಪಾಟೀಲ, ಮುಖಂಡ ಮಹಾಂತೇಶ ವಕ್ಕುಂದ ಇತರರಿದ್ದರು.ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 