ಬಾಗಲಕೋಟಿ ಉಪ ಚುನಾವಣೆ ಬಿಜೆಪಿ ಜಯ ಖಚಿತ : ಮಹಾಂತೇಶ ದೊಡ್ಡಗೌಡರ
BJP is certain to win Bagalkoti by-election: Mahantesh Doddagouda
ಬಾಗಲಕೋಟ 29: ಪ್ರಸಕ್ತ ಕಾಂಗ್ರೆಸ್ ಸರ್ಕಾರದ ಆಡಳಿತ ಅವ್ಯವಸ್ಥೆಗೆ ರಾಜ್ಯದ ಜನ ಬೇಸತ್ತಿದ್ದು, ಇಲ್ಲಿನ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಈ ಕ್ಷೇತ್ರದ ಅಭಿವೃದ್ಧಿಗೆ ಶಾಸಕರಾಗಿ ಅನೇಕ ಕೆಲಸಗಳನ್ನು ಮಾಡಿದ್ದು, ಸರ್ವ ಜನರ ಪ್ರೀತಿಯ ವ್ಯಕ್ತಿಯಾಗಿ ಎಲ್ಲ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದು ಅವರ ಜಯ ಖಚಿತ ಎಂದು ಕಿತ್ತೂರು ಮಾಜಿ ಶಾಸಕರು, ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಹೇಳಿದರು.
ಅವರು ಬಾಗಲಕೋಟ ವಿಧಾನಸಭೆಗೆ ಏಪ್ರಿಲ್ 8 ರಂದು ನಡೆಯುವ ಉಪ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಪರವಾಗಿ ರವಿವಾರದಂದು ನಗರದ ಬೂತ್ ನಂಬರ್ 15 ರಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ ಸದಸ್ಯರಾದ ಹನುಮಂತ ನಿರಾಣಿ, ಮಾಜಿ ವಿಧಾನ ಪರಿಷತ ಸದಸ್ಯರಾದ ಅರುಣ್ ಶಹಾಪುರ,ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಲ್ಲಣ್ಣ ಯಾದವಾದ, ರಾಜ್ಯ ಕಾರ್ಯದರ್ಶಿಗಳಾದ ಶರಣು ತಳ್ಳಿಗೇರಿ, ಕಿತ್ತೂರು ಮಂಡಲ ಅಧ್ಯಕ್ಷರಾದ ಶ್ರೀಕರ್ ಕುಲಕರ್ಣಿ, ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 