ಧರ್ಮಸ್ಥಳ ಉಳಿವಿಗಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಪ್ರತಿಭಟನೆ
BJP launches 'Dharmayudha' protest for the survival of Dharmasthala
ಇಂಡಿ 26: ಶ್ರೀಕ್ಷೇತ್ರ ಧರ್ಮಸ್ಥಳದ ಉಳಿವಿಗಾಗಿ ಬಿಜೆಪಿಯಿಂದ ಇಂಡಿ ನಗರದಲ್ಲಿ ಮಂಗಳವಾರ ಧರ್ಮಯುದ್ಧ ಪ್ರತಿಭಟನೆ ನಡೆಸಲಾಯಿತು.ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ತಹಶೀಲ್ದಾರ ಕಚೇರಿ ತನಕ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮೆರವಣಿಗೆಯಲ್ಲಿ ಧರ್ಮಕ್ಕೆ ಜಯವಾಗಲಿ, ದುಷ್ಟರ ಸಂಹಾರವಾಗಲಿ, ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅವಹೇಳನ ಮಾಡಿದವರಿಗೆ ಶಿಕ್ಷೆಯಾಗಲಿ, ಎಡಪಂಥಿಯರ ಷಡ್ಯಂತ್ರ ಬಯಲಿಗೆಳೆಯೋಣ ಧರ್ಮಸ್ಥಳ ರಕ್ಷಿಸೋಣ ಎಂಬ ಭಿತ್ತಿ ಫಲಕ ಹಿಡಿದು, ಭಾರತ ಮಾತಾ ಕೀ ಜೈ, ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ, ಷಡ್ಯಂತ್ರ ರಚಿಸಿದ ಶಶಿಕಾಂತ್ ಸೆಂಥಿಲ್‌ಗೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇಂಡಿ ತಹಶೀಲ್ದಾರ ಕಚೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ ಅವರು ಧರ್ಮದ ರಕ್ಷಣೆಗಾಗಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ. ಧರ್ಮಸ್ಥಳ ಅಸಂಖ್ಯಾತ ಜನರ ಶ್ರದ್ಧಾ ಹಾಗೂ ಭಕ್ತಿಯ ಸ್ವರೂಪ. ಯಾವುದೇ ಧರ್ಮ, ಜಾತಿ ಭೇದವಿಲ್ಲದೇ ಮಾನವೀಯತೆ ಉಣಬಡಿಸುತ್ತಿರುವ ಧರ್ಮಸ್ಥಳ ಮಂಜುನಾಥ ಪುಣ್ಯಕ್ಷೇತ್ರವಾಗಿದೆ ಎಂದು ಹೇಳಿದರು.
ಇಂಡಿ ಮಂಡಲ ಬಿಜೆಪಿ ಅಧ್ಯಕ್ಷ ಹಣಮಂತರಾಯಗೌಡ ಪಾಟೀಲ ಅವರು ಇಂಥ ಕ್ಷೇತ್ರದ ವಿರುದ್ಧ ರಾಷ್ಟ್ರ ವಿರೋಧಿಗಳು, ಮಾನವತೆಯ ವಿರೋಧಿಗಳು ಕುತಂತ್ರದಿಂದ ಧರ್ಮಸ್ಥಳದ ಹೆಸರಿಗೆ ಚ್ಯುತಿ ತರುವ ಹುನ್ನಾರ ನಡೆದಿದೆ ಎಂದು ಹೇಳಿದರು.
ಮಲ್ಲಿಕಾರ್ಜುನ ಕಿವಡೆ ಮಾತನಾಡಿ ಸುಕ್ಷೇತ್ರಕ್ಕೆ ಧರ್ಮಸ್ಥಳ ಮಂಜುನಾಥನಿಗೆ, ಪೀಠಾಧಿಪತಿ ವೀರೇಂದ್ರ ಹೆಗ್ಗಡೆ ಅವರಿಗೆ ಕಳಂಕ ತರುವ ಕೆಲಸ ನಡೆಯಿತ್ತಿದೆ. ಅದು ಇದೀಗ ಜಗಜ್ಜಾಹೀರವಾಗಿದೆ. ಇದು ಮಾನವಕುಲಕ್ಕೆ ಕಳಂಕ ತರುವ ಕೆಲಸ ಎಂದು ಟೀಕಿಸಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲುಗೌಡ ಪಾಟೀಲ ಅವರು ಯಾರೋ ಒಬ್ಬರು 20 ವರ್ಷಗಳ ಬಳಿಕ ಬುರುಡೆ ಹಿಡಿದು ಬಂದ ಅನಾಮಿಕ ವ್ಯಕ್ತಿಯ ಮಾತು ನಂಬಿ ಧರ್ಮ ವಿರೋಧಿ, ಜನ ಜನವಿರೋಧಿ, ಸನಾತನ ವಿರೋಧಿ ಸರ್ಕಾರ ಎಸ್‌ಐಟಿ ರಚಿಸಿ ಆತ ತೋರಿಸಿದಲ್ಲೆಲ್ಲ ಅಗೆದರು. ಆದರೆ, ಅಲ್ಲಿ ಏನೂ ಸಿಗಲಿಲ್ಲ. ಇದರಿಂದ ಮಾಸ್ಕ್ ಧರಿಸಿದ್ದ ಅನಾಮಿಕ ವ್ಯಕ್ತಿಯ ಮುಖವಾಡ ಕಳಚಿದೆ. ಅವರ ಹಿಂದೆ ಯಾರೆಲ್ಲ ಇದ್ದಾರೆ, ಅವರೆಲ್ಲರ ವಿರುದ್ಧ ಕಾನೂನು ಪ್ರಕಾರ ಕ್ರಮಕೈಗೊಳ್ಳಬೇಕು. ಈ ಸಮಾಜವನ್ನು, ಧರ್ಮವನ್ನು ರಕ್ಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಈ ಸುದ್ದಿ ತಿಳಿದು ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಉಪತಹಶೀಲದಾರ ಎಸ್ ಆರ್ ಮುಜಗೊಂಡ ಅವರು ಮನವಿ ಸ್ವೀಕರಿಸಿದರು. ಬಿಜೆಪಿ ಮುಖಂಡರಾದ ಅನೀಲ ಜಮಾದಾರ, ದೇವಿಂದ್ರ್ಪ ಕುಂಬಾರ, ಅಶೋಕಗೌಡ ಬಿರಾದಾರ, ಬಾಳು ಮುಳಜಿ, ಶ್ರೀಶೈಲಗೌಡ ಬಿರಾದಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 