ಬೆಂಗಳೂರು, ಮಾ 24, ತೀವ್ರ ಭೀತಿಯುಂಟು ಮಾಡಿರುವ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಈ ಮಾಸಾಂತ್ಯದವರೆಗೆ ನಗರದ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಈ ಕುರಿತು ಹೇಳಿಕೆ ಬಿಡುಗಡೆ ಮಾಡಿದ್ದು, ರಾಜ್ಯದೆಲ್ಲೆಡೆ ಕರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಹಾಗೂ ರಾಜ್ಯಸರ್ಕಾರ ಲಾಕ್‌ಡೌನ್‌ಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಪಕ್ಷದ ನಾಯಕರು,ಕಾರ್ಯಕರ್ತರು ಮತ್ತು ಸಾರ್ವಜನಿಕರಿಗೆ ಮಾರ್ಚ್ ೩೧ರ ವರೆಗೆ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನಕ್ಕೆ ಪ್ರವೇಶ ನಿರ್ಭಂಧಿಸಲಾಗಿದೆ ಎಂದಿದ್ದಾರೆ. ಅಲ್ಲಿಯವರೆಗೆ ರಾಜ್ಯದಲ್ಲಿ ಪಕ್ಷದ ಯಾವುದೇ ಸಭೆ, ಸಮಾರಂಭಗಳನ್ನು ನಡೆಸಬಾರದು, ಅತೀ ತುರ್ತು ವಿಷಯಗಳಿದ್ದರೆ ದೂರವಾಣಿ ಮುಖಾಂತರ ರಾಜ್ಯ ಕಛೇರಿಯನ್ನು ಸಂಪರ್ಕಿಸಬಹುದೆಂದುಬಿಜೆಪಿ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಕೊರೋನಾದಂತಹ ಮಾರಕ ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ರಾಜ್ಯ ಸರ್ಕಾರಕೈಗೊಂಡ ಕ್ರಮಗಳನ್ನು ರಾಜ್ಯ ಬಿಜೆಪಿ ಘಟಕವು ಸ್ವಾಗತಿಸುತ್ತದೆ ಮತ್ತು ತನ್ನ ಸಂಪೂರ್ಣಬೆಂಬಲವನ್ನು ವ್ಯಕ್ತಪಡಿಸುತ್ತದೆ ಎಂದಿದ್ದಾರೆ.