ಮುದೋಳದಲ್ಲಿ ಬಿಜೆಪಿ ಸಂಘಟನಾ ಸಭೆ
BJP organizational meeting in Mudhol
ರನ್ನ ಬೆಳಗಲಿ 18 : ಪಟ್ಟಣದ ಲಕ್ಷ್ಮೀ ದೇವಾಲಯ ಆವರಣದಲ್ಲಿ ಮಂಗಳವಾರ ಭಾರತೀಯ ಜನತಾ ಪಕ್ಷದ ಮುದೋಳ ನಗರ ಹಾಗೂ ಗ್ರಾಮೀಣ ಮಂಡಲಗಳ ಆಶ್ರಯದಲ್ಲಿ ಸಂಘಟನಾ ಸಭೆ ನಡೆಯಿತು. ಸಂಸದ ಗೋವಿಂದ ಎಂ. ಕಾರಜೋಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪಕ್ಷದ ಕಾರ್ಯಕರ್ತರು ಎಸ್‌ಐಆರ್ ಕಾರ್ಯವನ್ನು ಅತ್ಯಂತ ಕಾಳಜಿಯಿಂದ ನಿರ್ವಹಿಸಿ ಪೂರ್ಣಗೊಳಿಸಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಮುದೋಳ ಮತಕ್ಷೇತ್ರದಲ್ಲಿ 29,928 ಮತದಾರರು ಹಾಗೂ ರಾಜ್ಯದಲ್ಲಿ ಸುಮಾರು ಒಂದು ಕೋಟಿಗೂ ಅಧಿಕ ಮತದಾರರು ಎಸ್‌ಐಆರ್ ಪ್ರಕ್ರಿಯೆಯಲ್ಲಿದ್ದಾರೆ ಎಂದು ತಿಳಿಸಿದರು.
ಬರಗಾಲ ಪರಿಸ್ಥಿತಿಯಲ್ಲಿ ರೈತರು ಪರದಾಡುತ್ತಿದ್ದರೂ ಸರ್ಕಾರ ಸೂಕ್ತ ಗಮನ ಹರಿಸುತ್ತಿಲ್ಲ. ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುದೋಳ ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಬದ್ಧತೆ ಮುಂದುವರಿಯಲಿದೆ ಎಂದ ಅವರು, ಕಬಿಣ ತಂತ್ರಜ್ಞಾನ ಕಾಲೇಜು ನಿರ್ಮಾಣಕ್ಕಾಗಿ ಮುಗಳಖೋಡ ಗ್ರಾಮದಲ್ಲಿ 300 ಎಕರೆ ಜಮೀನು ಮೀಸಲಿಡುವ ಹಾಗೂ ಮಹಿಳಾ ವಸತಿ ಪದವಿ ಮಹಾವಿದ್ಯಾಲಯ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಲಾಗಿದೆ ಎಂದು ಹೇಳಿದರು. ಅಭಿವೃದ್ಧಿ ನಿರಂತರ ಪ್ರಕ್ರಿಯೆಯಾಗಿರಬೇಕು ಎಂದರು.
ಧರೇಪ್ಪ ಸಾಂಗ್ಲೀಕರ ಮಾತನಾಡಿ, ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಹಾಗೂ ಸಂಘಟನಾ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಬೇಕು ಎಂದು ಕರೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು ಯುವ ಸಮೂಹಕ್ಕೆ ಕರೆ ನೀಡಿದ್ದು, ಜನಸೇವೆಯಲ್ಲಿ ಮುಂದಾಗಿ ದೇಶದ ಭವಿಷ್ಯದ ಬಗ್ಗೆ ಚಿಂತನೆ ನಡೆಸಬೇಕು ಎಂದು ಹೇಳಿದರು. ಬಸವರಾಜ ಮಳಲಿ ಎಸ್‌ಐಆರ್ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಸಿದ್ದುಗೌಡ ಪಾಟೀಲ, ಸದಾಶಿವ ಸಂಕಷ್ಟಿ, ಮಹಾಂತೇಶ ಹಿಟ್ಟಿನಮಠ, ಆರಿ್ಟ. ಪಾಟೀಲ, ಸಂಗನಗೌಡ ಕಾತರಕಿ, ನಾಗಪ್ಪ ಅಂಬಿ, ಬಸಪ್ಪ ಬಿಳ್ಳೂರ, ಹಣಮಂತ ಇಟಾಣಿ, ಪಂಡಿತ ಪೂಜಾರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಪಟ್ಟಣದ ಪ್ರಮುಖರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 