ಬಿಜೆಪಿ ಪ್ರತಿಭಟನೆ: ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ - 8ಕ್ಕೂ ಅಧಿಕ ಕಾರ್ಯಕರ್ತರ ಬಂಧನ

BJP protest: Clashes between activists and police - more than 8 activists arrested

ಬಿಜೆಪಿ ಪ್ರತಿಭಟನೆ: ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ - 8ಕ್ಕೂ ಅಧಿಕ ಕಾರ್ಯಕರ್ತರ ಬಂಧನ 

ಬೆಳಗಾವಿ 24: ರಾಜ್ಯ ಸರಕಾರದ ಬಜೆಟ್ ಹಾಗೂ 18 ಬಿಜೆಪಿ ಶಾಸಕರ ಅಮಾನತ್ತು ಖಂಡಿಸಿ ಸೋಮವಾರ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಸುಮಾರು 8ಕ್ಕೂ ಅಧಿಕ ಕಾರ್ಯಕರ್ತರನ್ನು ಮಾರ್ಕೇಟ್ ಪೊಲೀಸರು ವಶಕ್ಕೆ ಪಡೆದರು.ಇದಕ್ಕೂ ಮೊದಲು ಬೆಳಗಾವಿ ನಗರದ ರಾಣಿ ಚನ್ನಮ್ಮ ಸರ್ಕಲ್ ಹತ್ತಿರ ಬಿಜೆಪಿ ಬೃಹತ್ ಪ್ರತಿಭಟನೆ ನಡೆಯಿತು ಸಿ.ಎಂ ಸಿದ್ಧರಾಮಯ್ಯ ಡಿ.ಸಿ.ಎಂ ಡಿ.ಕೆ ಶಿವಕುಮಾರ್ ಭಾವಚಿತ್ರ ಇರುವ ಪ್ಲೇ ಕಾರ್ಡಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಅರ್ಧ ಗಂಟೆಗೂ ಹೆಚ್ಚುಕಾಲ ರಸ್ತೆ ತಡೆ ಮಾಡಿದರು.ರಾಜ್ಯ ಸರಕಾರ ಬಜೆಟ್ ಮಂಡಿಸಿದ್ದು ಹಿಂದು ವಿರೋಧಿ ಬಜೆಟ್ ಹಾಗೂ ದಲಿತರ ಅನುದಾನವನ್ನು ತನ್ನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಜಿಲ್ಲಾಧಿಕಾರಿ ಕಚೇರಿ ಎದುರು ಅಳವಡಿಸಲಾದ ಗ್ಯಾರಂಟಿ ಯೋಜನೆಯ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದ ವೇಳೆ ಪೊಲೀಸರು ಆಗಮಿಸಿ ತಡೆದ ಪರಿಣಾಮ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.ಇದೇ ಸಂದರ್ಭದಲ್ಲಿ ಪೊಲೀಸರಿಗೆ ತಳ್ಳಾಟ ನೂಕಾಟ ನಡೆಸಿದ ಸುಮಾರು 8 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ಮಾರ್ಕೆಟ್ ಪೊಲೀಸರು ವಶಕ್ಕೆ ಪಡೆದುಕೊಂಡರು.