ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದು ಬಿಜೆಪಿ ಪ್ರತಿಭಟನೆ
BJP protests against Congress government today, condemning price hike
ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದು ಬಿಜೆಪಿ ಪ್ರತಿಭಟನೆ
ಕೊಪ್ಪಳ 01: ರಾಜ್ಯದಲ್ಲಿ ವಿವಿಧ ಅಗತ್ಯ ಸೇವೆಗಳು, ಪದಾರ್ಥಗಳ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪಕ್ಷದಿಂದ ಏಪ್ರಿಲ್ 2ರಂದು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುವುದು ಎಂದು ಕೊಪ್ಪಳ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ದಡೇಸೂಗೂರು ಹೇಳಿದರು.
ಅವರು ಮಂಗಳವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ, ಉದ್ದೇಶಿಸಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅವೈಜ್ಞಾನಿಕವಾಗಿ ಬೆಲೆಗಳನ್ನು ಏರಿಸುತ್ತಲೇ ಹೊರಟಿದೆ. ಎರಡೆರಡು ಬಾರಿ ವಿದ್ಯುತ್ ದರ ಹೆಚ್ಚಿಸಿದ್ದರೆ, ಹಾಲಿನ ಬೆಲೆ ಯನ್ನು ಒಂದೇ ಬಾರಿಗೆ 4 ರೂ ಹೆಚ್ಚಿಸಿದೆ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿದೆ, ಹಾಲಿನ ಬೆಲೆ ಏರಿಕೆ ಮಾಡಿ ರೈತರಿಗೆ ಪ್ರೋ ತ್ಸಾಹ ಧನವೂ ನೀಡದೇ ವಂಚಿಸಿದೆ,ಮುದ್ರಾಂಕ ಶುಲ್ಕವನ್ನು ಮನಸೋಯಿಚ್ಛೆ ಏರಿಸಲಾಗಿದೆ. ವೃತ್ತಿ ತೆರಿಗೆ,ವಾಹನ ನೊಂದಣಿ ಶುಲ್ಕ, ಶಾಲಾ ಕಾಲೇಜುಗಳ ಶುಲ್ಕ ವಿದ್ಯುತ್ ಚಾಲಿತ ವಾಹನಗಳ ಮೇಲಿನ ತೆರಿಗೆ,ಬಸ್ ದರ, ಬೀಜ, ಮದ್ಯ, ವಿದ್ಯುತ್ ಶುಲ್ಕ, ಆಸ್ಪತ್ರೆ ಶುಲ್ಕಗಳ ನ್ನು ಸಹ ಹೆಚ್ಚಿಸಿದೆ. ಜನರು ವಿಶ್ವಾಸವಿಟ್ಟು ಅಧಿಕಾರ ನೀಡಿದ್ದನು ದುರುಪಯೋಗಪಡಿಸಿಕೊಳ್ಳುತ್ತಿದೆ,
ಗ್ಯಾರೆಂಟಿ ಯೋಜನೆಗಳನ್ನು ನೀಡಿ ಯಾವುದೇ ದರ ಹೆಚ್ಚಿಸುವುದಿಲ್ಲ ಎಂದು ಹೇಳಿ ಈಗ ಪದೇ ಪದೇ ದರ ಹೆಚ್ಚಿಸುತ್ತಿರುವುದು ಸರಿಯಲ್ಲ ಇದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನ ಧರಣಿಯಲ್ಲಿ ಕೊಪ್ಪಳ ಜಿಲ್ಲೆಯಿಂದ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಹೆಚ್ಚಿನಸಂಖ್ಯೆಯಲ್ಲಿ ಪಾಲ್ಗೊಳ್ಳುವರು ಎಂದರು.ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ,ಡಾ.ಬಸವರಾಜ್ ಕ್ಯಾವಟರ್, ನಾಗರಾಜ್ ಬಿಲ್ಗಾರ್, ಶಿವು ಅರಕೇರಿ ಮಹೇಶ್ ಹಾದಿಮನಿ ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 