ವಂದೇ ಮಾತರಂ ಗೀತೆಯ ಪೂರ್ಣರೂಪಕ್ಕೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
BJP protests demanding the full version of the 'Vande Mataram' song
ಲೋಕದರ್ಶನ ವರದಿ
ಬೀಳಗಿ 19 : ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಸೀಮಿತಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಿ ಬೀಳಗಿ ತಾಲೂಕು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಡಾ. ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ತಹಶೀಲ್ದಾರ್ ವಿನೋದ ಹತ್ತಳ್ಳಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಎಚ್.ಆರ್. ನಿರಾಣಿ ಮಾತನಾಡಿ, ವಂದೇ ಮಾತರಂ ಗೀತೆಯ ಪೂರ್ಣರೂಪವನ್ನು ಗೌರವಪೂರ್ವಕವಾಗಿ ಹಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಗೀತೆಯು ಸ್ವಾತಂತ್ರ್ಯ ಹೋರಾಟ ಮತ್ತು ರಾಷ್ಟ್ರೀಯ ಭಾವನೆಯೊಂದಿಗೆ ಐತಿಹಾಸಿಕವಾಗಿ ಸಂಬಂಧ ಹೊಂದಿದೆ ಎಂದು ಹೇಳಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಎಚ್.ಜಿ. ಬಾಳಶೆಟ್ಟಿ ಮಾತನಾಡಿ, ವಂದೇ ಮಾತರಂ ಗೀತೆಯನ್ನು ಮೊಟಕುಗೊಳಿಸಿರುವ ಕ್ರಮವನ್ನು ವಿರೋಧಿಸಿದರು. ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 