ಲೋಕದರ್ಶನ ವರದಿ
ಅಥಣಿ: ಉಪ ಚುನಾವಣೆಯ ಎಲ್ಲ 15 ಕ್ಷೇತ್ರಗಳಲ್ಲೂ ಕೂಡ ದೊಡ್ಡ ಪ್ರಮಾಣದಲ್ಲಿ ಅಲ್ಪ ಸಂಖ್ಯಾತ ಮುಸ್ಲಿಂ, ಕ್ರೈಸ್ತರು ಸೇರಿದಂತೆ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಗಳ ಜನ ಬಿಜೆಪಿಯನ್ನು ಬೆಂಬಲಿಸುತ್ತಿದ್ದು, ಇಷ್ಟು ದೊಡ್ಡ ಪ್ರಮಾಣದಲ್ಲಿ ನಮಗೆ ಈ ಹಿಂದೆ ಎಂದಿಗೂ ಸಿಕ್ಕಿರಲಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಹೇಳಿದರು. ಅವರು ಕಾಗವಾಡ ಕ್ಷೇತ್ರದ ಅನಂತಪುರ ಗ್ರಾಮಕ್ಕೆ ತರಳುವ ಪೂರ್ವದಲ್ಲಿ ಅಥಣಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿದ್ದರು.
ಶಿವಾಜಿ ನಗರದ ಉಪ ಚುನಾವಣೆಯಲ್ಲಿ ಇಂದು ಭಾನುವಾರ ನಡೆದ ರೋಡ್ ಶೋ ಕಾರ್ಯಕ್ರಮದಲ್ಲಿ 10 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಪಾಲ್ಗೊಳ್ಳುವ ಮೂಲಕ ಇದೇ ಮೊದಲ ಬಾರಿಗೆ ಇತಿಹಾಸ ನಿಮರ್ಿಸಿದ್ದಾರೆ.
ರಾಜ್ಯದ ಎಲ್ಲ 15 ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯಥರ್ಿಗಳು ಮುಂಚೂಣಿಯಲ್ಲಿದ್ದಾರೆ ಹೀಗಾಗಿ ವಿರೋಧ ಪಕ್ಷದವರಿಗೆ ಈಗಲೇ ನಡುಕ ಹುಟ್ಟಿದೆ ಎಮದ ಅವರು ಡಿ.9 ಉಪ ಚುನಾವಣೆಯ ಫಲಿತಾಂಶ ನಂತರ ಕಾಂಗ್ರೆಸ್ ಪಕ್ಷದ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ತನ್ನ ಅಧಿಕಾರ ಕಳೆದುಕೊಳ್ಳುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.
ಚುನಾವಣಾ ಪ್ರಚಾರ ಸಭೆಗಳಲ್ಲಿ ಕಾಂಗ್ರೆಸ್ ನಾಯಕರು ಉಪ ಚುನಾವಣೆ ನಂತರ ಮತ್ತೆ ಜೆಡಿಎಸ್ ಬೆಂಬಲ ಪಡೆದು ಕಾಂಗ್ರೆಸ್ ಸರಕಾರ ರಚಿಸಲಿದೆ ಎಂದು ಸುಳ್ಳು ಹೇಳಿ ಮತದಾರರಲ್ಲಿ ಗೊಂದಲ ಮೂಡಿಸುವ ಯತ್ನ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ಧರಾಮಯ್ಯನವರನ್ನು ಹೊರತು ಪಡಿಸಿ ಬೇರೆ ಯಾವ ನಾಯಕರೂ ಕೂಡ ಉಪ ಚುನಾವಣೆಯಲ್ಲಿ ಭಾಗವಹಿಸುತ್ತಿಲ್ಲ ಕಾಂಗ್ರೆಸ್ ಈಗಲೇ ಒಡೆದ ಮನೆಯಾಗಿದ್ದು, ಚುನಾವಣೆ ನಂತರದಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚಲಿದೆ ಎಂದ ಅವರು ಗೋಕಾಕ ವಿಧಾನ ಸಭೆಯ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯಥರ್ಿ ಪೂಜಾರಿ ಆಯ್ಕೆಯಾದಲ್ಲಿ ಅವರು ಸರಕಾರದಲ್ಲಿ ಸಚಿವರಾಗುತ್ತಾರೆ ಎಂದು ಮಾಜಿ ಸಿಎಮ್ ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದ ಎಂದು ಹೇಳಿದರು.
ರಾಜ್ಯದ ಉಪ ಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲೂ ಕೂಡ ನಾನೇ ಸ್ವತಃ ಮೂರ್ನಾಲ್ಕು ಬಾರಿ ಪ್ರವಾಸ ಕೈಗೊಂಡು ಪ್ರಚಾರ ನಡೆಸಿದ್ದೇನೆ ಎಲ್ಲ ಕಡೆಗಳಲ್ಲಿ ವ್ಯಾಪಕ ಬೆಂಬಲ ಸಿಗುತ್ತಿದ್ದು, ಎಲ್ಲ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯಥರ್ಿಗಳು ಗೆಲವು ಸಾಧಿಸುವ ಮೂಲಕ ಮುಂದಿನ ಅವಧಿ ಕೊನೆಯಾಗುವವರೆಗೂ ಬಿಜೆಪಿ ಆಡಳಿತ ಸುಭದ್ರವಾಗಿ ಮುಂದುವರೆಯಲಿದೆ ಎಂದು ಹೇಳಿದರು.
ಡಿಸಿಎಮ್ ಲಕ್ಷ್ಮಣ ಸವದಿ, ಶಾಸಕ ದುಯರ್ೋಧನ ಐಹೊಳೆ, ಚುನಾವಣಾ ಉಸ್ತುವಾರಿಗಳಾದ ಶ್ರೀಕಾಂತ ಕುಲಕಣರ್ಿ, ಬಿಜೆಪಿ ಪ್ರಧಾನ ಕಾರ್ಯದಶರ್ಿ ಮಹೇಶ ಟೆಂಗಿನಕಾಯಿ, ಮಾಧ್ಯಮ ಪ್ರಮುಖ ಅನೀಲ ಶಾಸ್ತ್ರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.