ನಾಗಪುರ, ನ 07: ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವೀಸ್ ನಾಯಕತ್ವದಲ್ಲಿ ಆದಷ್ಟು ಶೀಘ್ರದಲ್ಲೇ ಭಾರತೀಯ ಜನತಾ ಪಕ್ಷ ಸರ್ಕಾರ ರಚಿಸಲಿದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟಿನ ನಡುವೆ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಭೇಟಿ ಮಾಡಲಿರುವ ಗಡ್ಕರಿ, . ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಫಡ್ನವೀಸ್ ನೇತೃತ್ವದಲ್ಲಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯಾಗಬೇಕು ಮತ್ತು ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.
ಈ ವಿಷಯದಲ್ಲಿ ಆರ್ಎಸ್ಎಸ್ನ ಯಾವುದೇ ಮಧ್ಯಸ್ಥಿಕೆಯನ್ನು ಕೇಂದ್ರ ಸಚಿವರು ತಳ್ಳಿಹಾಕಿದ್ದಾರೆಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದರು.
ತಾವು ಮಹಾರಾಷ್ಟ್ರ ರಾಜ್ಯ ರಾಜಕಾರಣಕ್ಕೆ ಹಿಂತಿರುಗುವ ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಹಲಿಯಲ್ಲಿ ಕೆಲಸ ಮಾಡುವುದನ್ನು ಮುಂದುವರಿಸುವುದಾಗಿ ತಿಳಿಸಿದರು.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಂದು ಎರಡು ವಾರಗಳು ಕಳೆದಿವೆ. ಮತದಾರರು ಬಿಜೆಪಿ ಮತ್ತು ಶಿವಸೇನೆ ಮೈತ್ರಿಕೂಟಕ್ಕೆ ಬಹುಮತವನ್ನು ನೀಡಿದ್ದಾರೆ. ಆದಾಗ್ಯೂ ರಾಜ್ಯದಲ್ಲಿ ಇನ್ನೂ ಯಾವುದೇ ಸರ್ಕಾರ ರಚನೆಯಾಗಿಲ್ಲ. ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಮತ್ತು ಶಿವಸೇನೆ ಹೋರಾಟ ನಡೆಸುತ್ತಿವೆ.