ಸೆ.1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಯಾತ್ರೆ
BJP to hold Dharmasthala Chalo Yatra on September 1
ದೇವರಹಿಪ್ಪರಗಿ 30: ಹಿಂದುಗಳ ಪವಿತ್ರ ಯಾತ್ರಾ ಸ್ಥಳವಾದ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ವಿರೋಧಿಸಿ ಸೆ.1ರಂದು ಬಿಜೆಪಿಯಿಂದ ಧರ್ಮಸ್ಥಳ ಚಲೋ ಯಾತ್ರೆ ನಡೆಸಲಾಗುತ್ತಿದೆ ದೇವರಹಿಪ್ಪರಗಿ ಕ್ಷೇತ್ರದಿಂದ ಸುಮಾರು 20ಕ್ಕೂ ಹೆಚ್ಚು ವಾಹನಗಳಲ್ಲಿ, ಸಹಸ್ರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧರ್ಮದ ಉಳಿವಿಗಾಗಿ ಸೆಪ್ಟೆಂಬರ್ 1ರಂದು ಧರ್ಮಸ್ಥಳ ಚಲೋ ನಡೆಸಿ ಬೃಹತ್ ಸಮಾವೇಶ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಿರ್ಧರಿಸಿದೆ. ಸರ್ಕಾರದಿಂದ ಭಕ್ತರ ಭಾವನೆಗಳಿಗೆ ಧಕ್ಕೆಯಾಗಿದೆ. ಧರ್ಮಸ್ಥಳದ ಸುತ್ತಮುತ್ತಲಿನ ಅಸಹಜ ಸಾವಿನ ಪ್ರಕರಣಗಳ ತನಿಖೆಯನ್ನು ಎಸ್‌ಐಟಿ ಬದಲಿಗೆ ಎನ್‌ಐಎಗೆ ವಹಿಸಿ ಎಂದು ಆಗ್ರಹಿಸಲು ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ ಅವರ ನೇತೃತ್ವದಲ್ಲಿ ಬಿಜೆಪಿ ಮುಖಂಡರು, ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 