ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತ : ಪಿ. ರಾಜೀವ್

ಕಲಬುರಗಿ, ನ. 14 :        ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಲಿದೆ ಎಂದು ತಾಂಡಾ ಅಭಿವೃದ್ಧಿ ನಿಮಗದ ಅಧ್ಯಕ್ಷ ಪಿ. ರಾಜೀವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಪಚುನಾವಣೆ ನಡೆಯುತ್ತಿರುವ ಎಲ್ಲಾ 15 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಕೆಳಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ಶರತ್ ಬಚ್ಚೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಸಮುದ್ರದಲ್ಲಿನ ಕಸ ಕಡ್ಡಿಗಳು ದಡಕ್ಕೆ ಬಂದು ಸೇರಿದ ಹಾಗೇ ಶರತ್ ಕೂಡ ಪಕ್ಷದ ವಿರುದ್ಧ ಸ್ಪರ್ಧಿಸಿದ್ದಾರೆ. ಸದ್ಯ ಸಮುದ್ರ ಸ್ವಚ್ಛವಾಗಿದೆ ಎಂದು ಅವರು ಶರತ್ ವಿರುದ್ಧ ಕಿಡಿಕಾರಿದರು.