ಬಿಜೆಪಿ ಪ್ರಜಾಪ್ರಭುತ್ವದ ಮುಖವಾಡ ಧರಿಸಿದೆ : ಅಶೋಕ್ ಗೆಹ್ಲೋಟ್
ಮುಂಬೈ, ಅ 17: ರಾಜಕೀಯ ಮಾಡುತ್ತಾ ಬಿಜೆಪಿ ಪ್ರಜಾಪ್ರಭುತ್ವದ ಮುಖವಾಡ ಧರಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ, ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ. ಮುಂಬೈ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ತಂಡ ಸಿಬಿಐ ಗಳನ್ನು ದುರ್ಬಳಕೆ ಮಾಡಿ ವಿರೋಧ ಚುನಾವಣೆಗೆ ಮುನ್ನ ವಿರೋಧ ಪಕ್ಷಗಳ ವಿಚಾರಣೆ ನಡೆಸಿದೆ ಎಂದು ಅವರು ಕಿಡಿಕಾರಿದರು. ಎನ್ ಸಿ ಪಿ ನಾಯಕ ಶರದ್ ಪವಾರ್ ಮತ್ತು ಪ್ರಫುಲ್ ಪಟೇಲ್ ವಿರುದ್ಧ ಕಳೆದ ಐದು ವರ್ಷಗಳಲ್ಲಿ ಯಾವುದೇ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಿರಲಿಲ್ಲ. ಆದರೆ ಮತದಾನಕ್ಕೆ ಕೆಲವೇ ದಿನ ಮುನ್ನ ಪ್ರಫುಲ್ ಪಟೇಲ್ ಅವರಿಗೆ ಇಡಿ ಮುನ್ನ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ. ಶರದ್ ಪವಾರ್ ಅವರ ಹೆಸರನ್ನು ಅಕ್ರಮ ಹಣ ವರ್ಗಾವಣೆ ಪ್ರಕರಣದೊಂದಿಗೆ ತಳುಕು ಹಾಕಲಾಗಿದೆ ಎಂದು ಗೆಹ್ಲೋಟ್ ದೂರಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 