ಇಂಡಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ
BJP workers celebrate victory in Indi
ಇಂಡಿ 14: ಭಾರೀ ಕುತೂಹಲ ಕೆರಳಿಸಿರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಹಾರದಲ್ಲಿ ಎನ್ಡಿಎ ಪ್ರಚಂಡ ಬಹುಮತ ಪಡಿಯುತ್ತಿದಂತೆ ಇಂಡಿ ನಗರದ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ತದ ಬಳಿ ಬಿಜೆಪಿ ಹಾಗೂ ಜೆಡಿಎಸ್ ಸಾವಿರಾರು ಕಾರ್ಯಕರ್ತರು ಸೇರಿ ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ವಿಜಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಬಿಜೆಪಿ ಮುಖಂಡರಾದ ಕಾಸುಗೌಡ ಬಿರಾದಾರ ಅವರು ಮಾತನಾಡಿ ದೇಶದಲ್ಲಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ರೈತ ಪರ ಜನ ಪರ. ಜನಸಾಮಾನ್ಯರಿಗೆ ಒಳ್ಳೆಯ ಆಡಳಿತ ನೀಡುತ್ತೀದೆ. ಭಾರತೀಯ ಜನತಾ ಪಕ್ಷದ ಮೇಲೆ ಭರವಸೆ ಇಟ್ಟು ಹಾಗೂ ಹತ್ತು ವರ್ಷಗಳ ಕಾಲ ಬಿಹಾರದಲ್ಲಿ ಉತ್ತಮ ಆಡಳಿತ ನೀಡಿದ ಎನ್ ಡಿ ಎ ನೇತೃತ್ವದಲ್ಲಿ ಸರ್ಕಾರದ ಮೇಲೆ ಭರವಸೆ ಇಟ್ಟು ಜನರು ಮತ್ತೆ ಬಿಜೆಪಿ ಹಾಗೂ ಜೆಡಿಯು ನೇತೃತ್ವದ ಪಕ್ಷಕ್ಕೆ ಬೆಂಬಲ ನೀಡಿದ್ದರಿಂದ ಮತ್ತೆ ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನೇತೃತ್ವದಲ್ಲಿ ಸರ್ಕಾರ ಅಧಿಕಾರ ನಡಿಸಲಿದೆ ಹಾಗೂ ಮುಂಬರುವ ದಿನಗಳಲ್ಲಿ ಕೂಡಾ ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ಶತ ಸಿದ್ಧ ಎಂದು ಹೇಳಿದರು.
ಈ ನಡುವೆ ಬಿಹಾರದ ಸಂಪೂರ್ಣ ಫಲಿತಾಂಶ ಹೊರ ಬೀಳುವ ಮುನ್ನವೇ ಕಾಂಗ್ರೆಸ್ ನಾಯಕರು ಮತಗಳ್ಳತನದ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಬಿಹಾರದಲ್ಲಿ ಮತಗಳ್ಳತನವಾಗಿದೆ ಎಂದು ಆರೋಪ ಮಾಡಿದ್ದು ಇಲ್ಲಿ ಸ್ಮರಿಸಬಹುದಾಗಿದೆ.
ಈ ವಿಜಯೋತ್ಸವದಲ್ಲಿ ಬಿಜೆಪಿ ತಾಲೂಕು ಘಟಕದ ಅಧ್ಯಕ್ಷರಾದ ಹಣಮಂತರಾಯಗೌಡ ಪಾಟೀಲ, ಬಿಜೆಪಿ ಮುಖಂಡರಾದ ಶೀಲವಂತ ಉಮರಾಣಿ ಅನೀಲ ಜಮಾದಾರ ಅನೀಲಗೌಡ ಬಿರಾದಾರ ರಾಮಸಿಂಗ್ ಕನ್ನೊಳ್ಳಿ ಶರಣಗೌಡ ಬಂಡಿ ಮಲ್ಲಿಕಾರ್ಜುನ ಕಿವಡೆ ಬಾಳು ಮುಳಜಿ ರವಿ ವಗ್ಗೆ ರಾಜು ಯರಗಲ್ಲ ಭೀಮನಗೌಡ ಪಾಟೀಲ ಸಂಜು ದಶವಂತ ಅದೃಷಪ್ಪ ವಾಲಿ ಶ್ರೀಧರ ಕ್ಷೇತ್ರಿ ಸೇರಿದಂತೆ ನೂರಾರು ಯುವಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 