ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಅಮೇರಿಕದ ಯುನಿವರ್ಸಿಟಿ ಜೊತೆ ಶೈಕ್ಷಣಿಕ ಒಡಂಬಡಿಕೆ
BLDE Deemed University Academic Agreement with American University
ವಿಜಯಪುರ 28: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಮತ್ತು ಅಮೇರಿಕದ ಯುನಿವರ್ಸಿಟಿ ಆಫ್ ಇಲಿನಾಯಿಸ್ ಚಿಕ್ಯಾಗೊ ನಡುವೆ ಶೈಕ್ಷಣಿಕ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
ಕಳೆದ ಮಾರ್ಚ್ ತಿಂಗಳಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು ಅಮೇರಿಕಕ್ಕೆ ತೆರಳಿದ್ದರು. ಅಲ್ಲಿ ಇಲಿನಾಯಿಸ ವಿಶ್ವವಿದ್ಯಾಲಯ, ಚಿಕ್ಯಾಗೊ ಅಂತರಾಷ್ಟೀಯ ಆರೋಗ್ಯ ವಿಭಾಗದ ಅಸೋಶಿಯೇಟ ಡೀನ ಡಾ. ಪ್ರಭಾಕರ ಬೆಳ್ಳೂರ ಅವರೊಂದಿಗೆ ಈ ಒಡಂಬಡಿಕೆ ಕುರಿತು ಚರ್ಚಿಸಿದ್ದರು. ಈಗ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಒಡಂಬಡಿಕೆಯಿಂದಾಗಿ ಎರಡೂ ವಿಶ್ವವಿದ್ಯಾಲಯಗಳು ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯ ನಿರ್ವಹಿಸಲಿವೆ. ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ, ಪಾಟೀಲ, ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಸಚಿವ ಡಾ. ರಾಘವೇಂದ್ರ ಕುಲಕರ್ಣಿ ಹಾಗೂ ವೈದ್ಯಕೀಯ ಮಹವಿದ್ಯಾಲಯದ ಪ್ರಾಚಾರ್ಯೆ ಡಾ. ತೇಜಸ್ವಿನಿ ವಲ್ಲಭ ಅವರ ಮಾರ್ಗದರ್ಶನದಲ್ಲಿ ಈ ಶೈಕ್ಷಣಿಕ ವರ್ಷದಿಂದಲೇ ಈ ಒಡಂಬಡಿಕೆ ಜಾರಿಗೆ ಬಂದಿದೆ. ಅದರಂತೆ ಬಿ. ಎಲ್. ಡಿ. ಇ. ಸಂಸ್ಥೆಯ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಅನುಭವ ಮತ್ತು ಜಾಗತಿಕ ಮಟ್ಟದ ಪರಿಚಯವನ್ನು ಪಡೆಯಲು ಹೊಸ ಅವಕಾಶಗಳು ದೊರೆಯಲಿವೆ.
ಈಗ ಇಂಟರ್ನ್ ಆಗಿರುವ ವಿದ್ಯಾರ್ಥಿನಿ ಮೇಘನಾ ಅವರು ಯುನಿವರ್ಸಿಟಿ ಆಫ್ ಇಲಿನಾಯಿಸ್ ಚಿಕಾಗೊನಲ್ಲಿ ನ್ಯೂರೋಸರ್ಜರಿ ವಿಭಾಗದಲ್ಲಿ ಎಲೆಕ್ಟಿವ್ ತರಬೇತಿಗೆ ಆಯ್ಕೆಯಾಗಿರುವುದು ಗಮನಾರ್ಹವಾಗಿದೆ. ಇಂಥ ಅಂತಾರರಾಷ್ಟ್ರೀಯ ಶೈಕ್ಷಣಿಕ ಸಹಕಾರಗಳು ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದ್ದು, ಜಾಗತಿಕ ಮಟ್ಟದಲ್ಲಿ ಶೈಕ್ಷಣಿಕ ಹಾಗೂ ಸಂಶೋಧನೆ ಕ್ಷೇತ್ರಗಳಲ್ಲಿ ಉತ್ತಮ ಬೆಳವಣಿಗೆಗೆ ನೆರವಾಗಲಿವೆ ಎಂದು ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ಡೀನ್ ಡಾ. ಎಂ. ಎಂ. ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 