ಬಿ.ಎಲ್.ಡಿ.ಇ ಆಸ್ಪತ್ರೆ ಬಡವರು ಮತ್ತು ಮಹಿಳೆಯರಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದೆ
BLDE Hospital is at the forefront of providing quality services to the poor and women.
ವಿಜಯಪುರ 17: ಬಿ.ಎಲ್.ಡಿ.ಇ ಆಸ್ಪತ್ರೆ ಬಡವರು ಮತ್ತು ಮಹಿಳೆಯರಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ. ಇಂದು ಬುಧವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಉಚಿತವಾಗಿ ಹೆರಿಗೆ ಮಾಡಿಸಲಾಗುತ್ತಿದೆ.
ಇದೇ ರೀತಿ ಬಡವರು ಮತ್ತು ಮಹಿಳೆಯರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿ ಮಾಡುವ ಮೂಲಕ ಸರ್ವರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಕಾರ್ಯ ನಿರಂತರವಾಗಿ ಸಾಗಿದೆ ಎಂದು ಅವರು ಹೇಳಿದರು. ಇಂಥ ಅಭಿಯಾನಗಳಿಂದ ಸೌಲಭ್ಯ ವಂಚಿತ ಸಮುದಾಯಗಳಲ್ಲಿನ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಹಾಗೂ ಸದೃಢ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಅನುಕೂಲವಾಗುತ್ತದೆ ಎಂದು ಅವರು ಹೇಳಿದರು. ಈ ಶಿಬಿರದಲ್ಲಿ ಸುಮಾರು 150 ಕ್ಕೂ ಹೆಚ್ಚು ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಅವರದಲ್ಲಿ ಸ್ತ್ರೀರೋಗ ಮತ್ತು ಪ್ರಸೂತಿ ವಿಭಾಗದಲ್ಲಿ 33, ವೈದ್ಯಕೀಯ ಚಿಕಿತ್ಸೆ ವಿಭಾಗದಲ್ಲಿ 50, ಶಸ್ತ್ರಚಿಕಿತ್ಸೆ ವಿಭಾಗದಲ್ಲಿ 67 ಮಹಿಳೆಯರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.
ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ವೈದ್ಯಕೀಯ ಅಧೀಕ್ಷಕ ಡಾ. ಆರ್. ಎಂ. ಹೊನ್ನುಟಗಿ, ಪ್ರಾಧ್ಯಾಪಕಿ ಡಾ.ವಿಜಯಾ ಪಾಟೀಲ, ಸಹಪ್ರಾಧ್ಯಾಪಕಿ ಡಾ. ಅನುಜಾ ಕುಡಗೋಡ, ಪ್ರಾಧ್ಯಾಪಕರಾದ ಡಾ. ವಿಜಯಕುಮಾರ ಜಿ. ವಾರದ, ಡಾ. ಆನಂದ ಅಂಬಲಿ, ಡಾ.ಶ್ರೀದೇವಿ ಕೋರಿ, ಡಾ. ನೀಲಮ್ಮ ಪಾಟೀಲ, ಡಾ.ರೂಪಾ ಶಹಾಪುರ, ವೈದ್ಯಕೀಯ ಸ್ನಾತಕೋತರ ವಿದ್ಯಾರ್ಥಿಗಳು, ಆರೋಗ್ಯ ಸೇವೆ ಕಾರ್ಯಕರ್ತರು ಉಪಸಿದ್ಧರಿದ್ದರು. ಧನ್ಯವಾದಗಳು ವಿಜಯಪುರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದಡಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ವನ್ನು ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಹಂಗಾಮಿ ಕುಲಪತಿ ಡಾ. ಅರುಣ ಚಂ. ಇನಾಮದಾರ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 