ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ವರ್ಷದ ಸಂಬಳ ನೀಡಿದ ಬಿ.ಎಸ್.ಯಡಿಯೂರಪ್ಪ

ಬೆಂಗಳೂರು, ಏ.1, ಕೊರೊನ ಸೋಂಕು ವಿರುದ್ಧದ ಹೋರಾಟಕ್ಕೆ ನನ್ನ ಒಂದು ವರ್ಷದ ಸಂಬಳವನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19' ಕ್ಕೆ ನೀಡುತ್ತಿದ್ದೇನೆ. ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಮಟ್ಟಿಗೆ ದೇಣಿಗೆ ನೀಡಿ ಈ ಹೋರಾಟಕ್ಕೆ ಬಲ ತುಂಬಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಕೋವಿಡ್-19 ತಡೆಗೆ ಇನ್ನು 14 ದಿನಗಳ ಕಾಲ ಲಾಕ್ ಡೌನ್ ನಿಯಮ ಪಾಲನೆ ಮಾಡುವುದು ಕಡ್ಡಾಯವಾಗಿದ್ದು, ಯಾರೂ ಮನೆಯಿಂದ ಹೊರಬರದಿರುವ ಮೂಲಕ ಸೋಂಕು ಹರಡದಂತೆ ಎಚ್ಚರ ವಹಿಸಬೇಕೆಂದು ಮನವಿ ಮಾಡಿದ್ದಾರೆ.ಈಗಾಗಲೇ ಮುಖ್ಯಮಂತ್ರಿಗಳ ಮನವಿಗೆ ಸ್ಪಂದಿಸಿರುವ ಉದ್ಯಮಿಗಳು, ಚಿತ್ರ ರಂಗದ ಪ್ರಮುಖರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ದೇಣಿಗೆ ನೀಡುತ್ತಿದ್ದಾರೆ.