ಲಕ್ನೋ, ನ 4: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಮೂಲ ನಿವೇಶನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀಪು ಸದ್ಯವೇ ಬರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಉತ್ತರಪ್ರದೇಶ ಸರ್ಕಾರ ಮುಂದಾಗಿದೆ .
ಜನರು ವಾಟ್ಸಪ್, ಟ್ವೀಟರ್, ಟೆಲಿಗ್ರಾಮ್ ಹಾಗೂ ಇನ್ಸ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ತೆರನಾದ ಮಾನಹಾನಿಯಾಗುವಂತಹ, ಧಕ್ಕೆ ತರುವಂತಹ ವಿಷಯಗಳನ್ನು ಹಂಚಿಕೊಳ್ಳದಂತೆ ನಿರ್ಬಂಧ ವಿಧಿಸಿ ಉತ್ತರಪ್ರದೇಶ ಸರ್ಕಾರ ನಾಲ್ಕುಪುಟಗಳ ನಿರ್ದೇಶನ ನೀಡಿದೆ ಎಂದೂ ವರದಿಯಾಗಿದೆ.
ಸುಮಾರು ಎರಡು ತಿಂಗಳ ಕಾಲ ಈ ನಿರ್ಬಂಧ ಅಯೋಧ್ಯೆಯಲ್ಲಿ ಮುಂದುವರಿಯಲಿದ್ದು, ಈ ಸಮಯದಲ್ಲಿ ವಿದ್ಯುನ್ಮಾನ ಮಾಧ್ಯಮಗಳಲ್ಲಿ ನಡೆಯಲಿರುವ ಯಾವುದೇ ಚರ್ಚೆಯನ್ನು ನಡೆಸದಂತೆ ನಿರ್ಬಂಧ ಹೇರಿದೆ.
ಅಯೋಧ್ಯಾ ಜಿಲ್ಲಾಧಿಕಾರಿ ಅನೂಜ್ ಕುಮಾರ್ ಝಾ ಅಕ್ಟೋಬರ್ 31ರಂದು ಬಿಡುಗಡೆ ಮಾಡಿರುವ ಪ್ರಕಟನೆಯಲ್ಲಿ, ಈ ಆದೇಶ ಡಿಸೆಂಬರ್ 31ರವರೆಗೂ ಜಾರಿಯಲ್ಲಿರುತ್ತದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಭಾರತೀಯ ದಂಡ ಸಂಹಿತೆ ಪ್ರಕಾರ ಪ್ರಕರಣ ದಾಖಲಿಸಲಾಗುವುದು ಎಂದೂ ಎಚ್ಚರಿಸಲಾಗಿದೆ.
ಯಾವುದೇ ಪ್ರತಿಷ್ಠಿತ ವ್ಯಕ್ತಿ, ದೇವರು, ವಿಗ್ರಹಗಳ ವಿರುದ್ಧದ ಯಾವುದೇ ಅವಹೇಳನಕಾರಿ ಪೋಸ್ಟ್ ಹಾಕಲು ಅವಕಾಶ ಇಲ್ಲ. ಜಿಲ್ಲೆಯಲ್ಲಿ ಯಾವುದೇ ಅನುಮತಿ ಇಲ್ಲದೆ ದೇವರ ವಿಗ್ರಹ ಸ್ಥಾಪಿಸಲು ಅವಕಾಶ ಇಲ್ಲ ತೀರ್ಪುನ ದಿನ ಯಾವುದೇ ಮೆರವಣಿಗೆಗೆ ಅವಕಾಶವಿಲ್ಲ .
ಅನುಮತಿ ಇಲ್ಲದೆ ಚರ್ಚೆ ನಡೆಸಲು ಯಾವುದೇ ವಿದ್ಯುನ್ಮಾನ ಮಾಧ್ಯಮಗಳಿಗೂ ಅವಕಾಶವೂ ಎಲ್ಲ ಸ್ಪಷ್ಟಪಡಿಸಲಾಗಿದೆ. ಯಾವುದೇ ರೀತಿಯಲ್ಲಿ ನಗರದಲ್ಲಿ ಮಾರಕಾಯುಧ ತೆಗೆದುಕೊಂಡು ಹೋಗುವಂತಿಲ್ಲ ಎಂದೂ ಸೂಚನೆ ನೀಡಲಾಗಿದೆ.