ಬಾಬು ಜಗಜೀವನರಾಮ್ ಅವರ 118 ನೇ ಜಯಂತಿ ಆಚರಣೆ
ಕೊಪ್ಪಳ 05: ಹಸಿರು ಕ್ರಾಂತಿ ಹರಿಕಾರ, ರಾಷ್ಟ್ರನಾಯಕ, ಭಾರತದ ಮಾಜಿ ಉಪಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನರಾಮ್ ಅವರ ಆದರ್ಶ, ಚಿಂತನೆಗಳನ್ನು ಹಾಗೂ ಅವರ ಸಾಧನೆಗಳನ್ನು ಅಳವಡಿಸಿಕೊಳ್ಳುವ ಮೂಲಕ, ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಇತರರಿಗೆ ಮಾದರಿಯಾಗಬೇಕು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಕೆ.ವಿ.ಪ್ರಸಾದ ಹೇಳಿದರು.ಅವರು ಏ.5 ರಂದು ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಾಬು ಜಗಜೀವನರಾಮ್ ಅವರ 118 ನೇ ಜಯಂತಿ ಆಚರಣೆಯಲ್ಲಿ ಮಾತನಾಡಿದರು.ರೈತರ ಜೀವನ ಹಸಿರು ಮಾಡಿದ ಮಹಾನ್ ನಾಯಕ ಬಾಬು ಜಗಜೀವನರಾಮ್ ಅವರು ಬಡವರ, ದೀನದಲಿತರ ಮತ್ತು ಕಾರ್ಮಿಕರ ಉದ್ಧಾರಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸುವ ಮೂಲಕ ಸಾಮಾನ್ಯರ ಜೀವನದಲ್ಲಿ ಇಂದಿಗೂ ಮಹಾನ್ ನಾಯಕರಾಗಿ, ಹಸಿರುಕ್ರಾಂತಿಯ ಹರಿಕಾರರಾಗಿ ಖ್ಯಾತಿ ಪಡೆದಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ. ಪ್ರಕಾಶ ಯಳವಟ್ಟಿ, ಕೊಪ್ಪಳ ವಿಶ್ವವಿದ್ಯಾಲಯದ ಆಡಳಿತಾಧಿಕಾರಿ ಪ್ರೊ. ತಿಮ್ಮಾರೆಡ್ಡಿ ಮೇಟಿ ಹಾಗೂ ನಾನಾ ವಿಭಾಗದ ಉಪನ್ಯಾಸಕರು ಸೇರಿದಂತೆ ಬೋಧಕೇತರ ಸಿಬ್ಬಂದಿಗಳು ಇದ್ದರು.