ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ

ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಪೂರ್ವಭಾವಿ ಸಭೆ Babu Jagjivan Ram and Dr. B.R. Ambedkar Jayanti Pre-meeting

​ಸವದತ್ತಿ : ನಗರದ ಕೃಷಿ ಇಲಾಖೆಯ ಸಭಾಭವನದಲ್ಲಿ ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಪೂರ್ವಭಾವಿ ಸಭೆಯು ಜರುಗಿತು. ಏಪ್ರಿಲ್ ತಿಂಗಳಿನಲ್ಲಿ ಬರುವ ಇಬ್ಬರು ಮಹಾನ್ ನಾಯಕರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.ಏಪ್ರಿಲ್ 5 ರಂದು ನಡೆಯುವ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನರಾಂ ಜಯಂತಿ ಹಾಗೂ ಏಪ್ರಿಲ್ 14 ರಂದು ನಡೆಯುವ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ.

​ಆಚರಣೆಯ ಎರಡೂ ಜಯಂತಿಗಳನ್ನು ಯಾವುದೇ ಲೋಪದೋಷಗಳಿಲ್ಲದೆ, ಸಕಲ ಸರ್ಕಾರಿ ಮರ್ಯಾದೆಗಳೊಂದಿಗೆ ಹಾಗೂ ಸಾರ್ವಜನಿಕರ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಯಿತು. ಜಯಂತಿಗಳ ಅಂಗವಾಗಿ ಹಮ್ಮಿಕೊಳ್ಳುವ ಮೆರವಣಿಗೆ, ವೇದಿಕೆ ಕಾರ್ಯಕ್ರಮ ಮತ್ತು ಸ್ವಚ್ಛತಾ ಕಾರ್ಯಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ  ಸೂಕ್ತ ನಿರ್ದೇಶನ ನೀಡಿದರು.

​"ದೇಶದ ಅಭಿವೃದ್ಧಿಗೆ ಮತ್ತು ಸಂವಿಧಾನದ ಘನತೆಗೆ ಅಪಾರ ಕೊಡುಗೆ ನೀಡಿದ ಈ ಮಹನೀಯರ ತತ್ತ್ವಗಳು ಇಂದಿನ ಪೀಳಿಗೆಗೆ ಮಾದರಿಯಾಗಿವೆ. ಅವರ ಜಯಂತಿಗಳನ್ನು ಎಲ್ಲರೂ ಒಗ್ಗೂಡಿ ಸಂಭ್ರಮದಿಂದ ಆಚರಿಸೋಣ ಎಂದು ಹೇಳಿದರು.ಈ ಸಭೆಯಲ್ಲಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ,ನಗರಸಭೆ ಪೌರಾಯುಕ್ತ ಸಂಗನಬಸಯ್ಯ, ತಾಪಂ ಎಇಇ ಆನಂದ ಬಡಕುಂದ್ರಿ, ಬಿಇಒ ಎ.ಎ.ಖಾಜಿ. ಎಚ್.ಆಯ್. ಕದ್ರಾಪೂರಕರ, ಶಿವಪ್ರಕಾಶ್ ಪಾಟೀಲ ವಿವಿಧ ಇಲಾಖೆಯ ಅಧಿಕಾರಿಗಳು, ದಲಿತ ಸಂಘಟನೆಗಳ ಮುಖಂಡರು ಹಾಗೂ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು, ಕಾರ್ಯಕ್ರಮದ ಯಶಸ್ಸಿಗೆ ಸಲಹೆ-ಸೂಚನೆಗಳನ್ನು ಹಂಚಿಕೊಂಡರು.