ಶಿರಹಟ್ಟಿ 05: ಹಸಿರು ಕ್ರಾಂತಿಯ ಹರಿಕಾರ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ರವರ 113 ನೇಯ ಜಯಂತಿ ನಿಮಿತ್ಯ ತಾಲೂಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಶ್ರದ್ಧಾ ಭಕ್ತಿಪೂರ್ವಕ ಪುಷ್ಪ ನಮನ ಸಲ್ಲಿಸಿದರು. ನಂತರ ತಾಲೂಕಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಎಸ್ ಬಿ. ಹತರ್ಿ ಮಾತನಾಡುತ್ತಾ, ಬಾಬು ಜಗಜೀವನರಾಮ್ ಜಯಂತಿಯಂದು ಅವರನ್ನು ಸ್ಮರಿಸುತ್ತೇವೆ. ಶೋಷಿತರ ಹಕ್ಕಿಗಾಗಿ ಹೋರಾಟ ಮಾಡಿದ ಮತ್ತು ಭಾರತಕ್ಕೆ ಅವರು ಮಾಡಿರುವ ಸೇವೆ ಸದಾ ಸ್ಪೂತರ್ಿದಾಯಕ ಎಂದು ಹೇಳಿದರು. ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.