ಹಾವೇರಿ:ಎ. 05: ಜಿಲ್ಲಾಡಳಿತ ವತಿಯಿಂದ ದೇಶದ ಮಾಜಿ ಉಪ ಪ್ರಧಾನ ಹಾಗೂ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರ 113ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಸರಳವಾಗಿ ಆಚರಣೆ ಮಾಡಲಾಯಿತು.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನೆಹರು ಓಲೇಕಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾಜರ್ುನ ಬಾಲದಂಡಿ, ಸಮಾಜ ಕಲ್ಯಾಣ ಅಧಿಕಾರಿ ಶ್ರೀಮತಿ ಚೈತ್ರಾ ಹಾಗೂ ಸಮಾಜದ ವಿವಿಧ ಮುಖಂಡರು, ಅಧಿಕಾರಿಗಳು ಬಾಬು ಜಗಜೀವನರಾಂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿದರು.
ಶಾಸಕ ನೆಹರು ಓಲೇಕಾರ ಅವರು ಮಾತನಾಡಿ, ಬಾಬು ಜಗಜೀವನರಾಂ ಅವರು ಸ್ವಾತಂತ್ರ್ಯ ಹೋರಾಟಗಾರರು, ಮುತ್ಸದ್ದಿ ನೇತಾರ, ಸರಳ ಜೀವಿ, ಸಮಾಜ ಸೇವಕ, ಅಸ್ಪೃಶ್ಯತಾ ನಿವಾರಕರಾಗಿ ಬಹುಮುಖ ಪ್ರತಿಭೆ ಹೊಂದಿದವರು. ಭಾರತದ ರಾಜಕಾರಣದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿ ವಿಶಿಷ್ಟವಾದ ಕೊಡುಗೆಯನ್ನು ನೀಡಿದ ಅವರು ಭಾರತದ ಉಪ ಪ್ರಧಾನಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಸಮಾಜ ಮುಖಿಯಾಗಿ ಚಿಂತಿಸುತ್ತಿದ್ದ ಬಾಬುಜೀ ಅವರು ಸಮ ಸಮಾಜದ ಹೋರಾಟಕ್ಕೆ ದುಡಿದ ಮಹಾನ್ ನಾಯಕ. ಇವರ ಹೋರಾಟ ಸಮಾಜ ಮುಖಿ ಚಿಂತನೆಗಳು, ರಾಜಕೀಯ ಮುತ್ಸದ್ದಿತನ ಇಂದಿನ ಸಮಾಜಕ್ಕೆ ಮಾದರಿಯಾಗಿದೆ ಎಂದು ಬಣ್ಣಿಸಿದರು.
ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ ದೇಸಾಯಿ ಹಾಗೂ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಅವರು ಮಾತನಾಡಿ, ಬಾಬು ಜಗಜೀವನರಾಂ ಅವರ ಸಾಮಾಜಿಕ ಕೊಡುಗೆ, ಅವರ ಹೋರಾಟ ಕುರಿತಂತೆ ಸ್ಮರಿಸಿಕೊಂಡರು.