ಜಾತ್ರೆ ಹಿನ್ನೆಲೆ: ಅಭಿವೃದ್ಧಿ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ
ಬೆಳಗಾವಿ, 17 : ಬೆಳಗಾವಿ ಗ್ರಾಮೀಣ ಕ್ಷೇತ್ರದ. ಹೊನ್ನಿಹಾಳದ ಶ್ರೀ ವಿಠ್ಠಲ ಬೀರದೇವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಒಳ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಕ್ಷೇತ್ರದ ಶಾಸಕರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂಂದ ಗ್ರಾಮದಲ್ಲಿನ ರಸ್ತೆಗಳ ನಿರ್ಮಾಣಕ್ಕಾಗಿ ಹಣ ಮಂಜೂರು ಮಾಡಿಸಲಾಗಿದೆ. ಅವರ ಮಾರ್ಗದರ್ಶನ ಹಾಗೂ ಸಲಹೆ, ಸೂಚನೆಗಳ ಮೇರೆಗೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂದಿನ ತಿಂಗಳು ಜಾತ್ರೆ ನಡೆಯಲಿದ್ದು, ಜಾತ್ರೆಗೆ ಬೇಕಾಗಿರುವ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳೋಣ ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸುರೇಖಾ ಕಟಬುಗೋಳ, ಪ್ರಕಾಶ ಕಡ್ಯಾಗೋಳ, ಶಿವಾನಂದ ಮಠದ, ಸುರೇಶ ಕಟಬುಗೋಳ, ರಾಜು ತಳವಾರ, ಶಿವನಪ್ಪ ಕೆಂಗೇರಿ, ಗಣಪು ಸುಳಗೇಕರ್, ರವಿ ಮಠದ, ಕೃಷ್ಣ ಜಾಧವ್, ಪಿಡಿಓ ಪ್ರಶಾಂತ ಮುನವಳ್ಳಿ, ದಾದಾಫೀರ್ ನದಾಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.