ಅಭಿವೃದ್ದಿ, ಸ್ವಚ್ಚತೆ, ಪರಿಸರ ಸಂರಕ್ಷಣೆ ಕಾರ್ಯದಲ್ಲಿ ತೋರಿದ ಸಾಧನೆಗೆ ಬಡಾಕಾನ ಶಿರಡಾ ಗ್ರಾಮ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ
Badakana Shirada village selected for Gandhi Gram Puraskar for achievements in development, cleanlin
ಲೋಕದರ್ಶನ ವರದಿ
ದಾಂಡೇಲಿ - ಮಾ. 25 : ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರ 2024-25 ನೇ ಸಾಲಿನಲ್ಲಿ ದಾಂಡೇಲಿ ತಾಲೂಕಿನ ಬಡಾಕಾನ ಶಿರಡಾ (ಕೋಗಿಲಬನ) ಗ್ರಾಮ ಪಂಚಾಯತಿ ತಾಲೂಕಾ ಮಟ್ಟದಲ್ಲಿ ಆಯ್ಕೆಯಾಗಿದೆ. ಈ ಕುರಿತು ಬೆಂಗಳೂರಿನ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪೀಠಾಧಿಕಾರಿಗಳು ಅಧಿಕೃತ ಆದೇಶ ಹೊರಡಿಸಿ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಅಭಿವೃದ್ದಿ, ಸ್ವಚ್ಚತೆ, ಪರಿಸರ ಸಂರಕ್ಷಣೆ ಹಾಗೂ ಸಮಗ್ರ ಗ್ರಾಮ ಅಭಿವೃದ್ದಿಯ ಕಾರ್ಯಗಳಲ್ಲಿ ತೋರಿದ ಸಾಧನೆಯನ್ನು ಪರಿಗಣಿಸಿ ಈ ಆಯ್ಕೆ ಮಾಡಲಾಗಿದೆ. ಬಡಾ ಕಾನಶಿರಡಾ ಗ್ರಾಮ ಪಂಚಾಯತಿಯು ವಿಶೇಷವಾಗಿ ಸ್ಚಚ್ಚತಾ ಅಭಿಯಾನ, ಮಳೆ ನೀರು ಸಂಗ್ರಹಣೆ ಹಾಗೂ ಸಾರ್ವಜನಿಕ ಸೇವೆಗಳ ಸುಧಾರಣೆಯಲ್ಲಿ ಗಮನಾರ್ಹ ಕೆಲಸಗಳನ್ನು ಕೈಗೊಂಡಿದೆ. ಗ್ರಾಮದಲ್ಲಿ ಘನತ್ಯಾಜ್ಯ ನಿರ್ವಹಣೆ ವ್ಯವಸ್ಥೆ ಸಮರ್ಕವಾಗಿ ಜಾರಿಗೊಂಡಿದ್ದು ಮನೆ ಮನೆಗೆ ಕಸ ಸಂಗ್ರಹಣೆ ಮತ್ತು ವಿಂಗಡಣೆೆ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಈ ಆಯ್ಕೆ ಹಿನ್ನಲೆಯಲ್ಲಿ ನಿಕಟಪೂರ್ವ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿ ವರ್ಗದಲ್ಲಿ ಸಂತಸ ವ್ಯಕ್ತವಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 