ಟಿಎಪಿಸಿಎಂ ನಿರ್ದೇಶಕರಾಗಿ ಬಗಲಿ ಅವಿರೋಧ ಆಯ್ಕೆ
Bagali elected unopposed as TAPCM director
ಟಿಎಪಿಸಿಎಂ ನಿರ್ದೇಶಕರಾಗಿ ಬಗಲಿ ಅವಿರೋಧ ಆಯ್ಕೆ
ತಾಳಿಕೋಟಿ 15: ಮುದ್ದೇಬಿಹಾಳ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘದ ಐದು ವರ್ಷದ ಅವಧಿಯ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ತಾಲೂಕಿನ ತಮದಡ್ಡಿ ಗ್ರಾಮದ ಬಸವರಾಜ ಚನ್ನಮಲ್ಲಪ್ಪ ಬಗಲಿ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 12 ಸ್ಥಾನದ ನಿರ್ದೇಶಕ ಮಂಡಳಿಯ ಈ ಚುನಾವಣೆಯಲ್ಲಿ ಬಸವರಾಜ ಬಗಲಿ ಅವರು ಸಾಮಾನ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈಗಾಗಲೇ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕೃತಜ್ಞತೆ: ತಮ್ಮನ್ನು ಅವಿರೋಧ ಆಯ್ಕೆಗೆ ಎಲ್ಲ ರೀತಿಯಿಂದಲೂ ಸಹಕರಿಸಿದ ಕೆ ಎಸ್ ಡಿ ಎಲ್ ಅಧ್ಯಕ್ಷರು, ಶಾಸಕರಾದ ಅಪ್ಪಾಜಿ ನಾಡಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿಎಸ್ ಪಾಟೀಲ(ಯಾಳಗಿ), ಮುಖಂಡರಾದ ಗುರು ತಾರನಾಳ, ಎಂ.ಎಸ್.ಮೇಟಿ, ಸಂಗನಗೌಡ ಪಾಟೀಲ (ಕವಡಿಮಟ್ಟಿ), ನಾನಾಗೌಡ ಹೊಸಳ್ಳಿ (ತಮದಡ್ಡಿ),ರಾಜುಗೌಡ ಕನಕರೆಡ್ಡಿ ಚಂದ್ರಶೇಖರ ಸಾಸ್ನೂರ ಅವರಿಗೆ ಬಗಲಿ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 