ಬಾಗಲಕೋಟೆ: 12 ರಂದು ವಿಶ್ವ ಬಾಲಕಾರ್ಮಿಕರ ಪದ್ದತಿ ವಿರೋಧಿ ದಿನಾಚರಣೆ

ಲೋಕದರ್ಶನ ವರದಿ

ಬಾಗಲಕೋಟೆ 07: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕರ  ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ  ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶಶೀಧರ ಕುರೇರ ಹೇಳಿದರು.

ಜಿ.ಪಂ ವಿಡಿಯೋ ಕಾನ್ಪರೇನ್ಸ್ ಹಾಲ್ನಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ಭವನದಿಂದ ಎಲ್.ಐ.ಸಿ ವೃತ್ತದವರೆಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲು ನಿರ್ದರಿಸಲಾಯಿತು. 10 ಗಂಟೆಗೆ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ದರಿಸಲಾಯಿತು. ಕಾರ್ಯಕ್ರಮ ಉದ್ಘಾಟನೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅನೀಲ ಕಟ್ಟಿ ಅವರನ್ನು ಆಹ್ವಾನಿಸಲು ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಅಸಂಘಟಿತ ಕಾಮರ್ಿಕರು, ಕಟ್ಟಡ ಕಾಮರ್ಿಕ ಸಂಘದವರು, ಗ್ಯಾರೇಜ ಮಾಲೀಕರು, ಪ್ಯಾಕ್ಟರಿ ಕೂಲಿಕಾಮರ್ಿಕರನ್ನು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಾಡಬೇಕೆಂದರು. ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲಾ, ಕಾಲೇಜುಗಳಲ್ಲಿ ಅಂದು ಪ್ರಾರ್ಥನಾ ವೇಳೆಯಲ್ಲಿ ಬಾಲ ಕಾಮರ್ಿಕ ಪದ್ದತಿ ನಿಮರ್ೂಲನೆ ಕುರಿತು ಪ್ರತಿಜ್ಞಾವಿಧಿ ಬೋದಿಸುವ ಕಾರ್ಯವಾಗಬೇಕು. ಈ ಕುರಿತು ಪ್ರತಿಯೊಂದು ಶಾಲೆಗಳಿಗೆ ಟಿಪ್ಪಣಿ ಕಳುಹಿಸಿಕೊಡಲು ಡಿಡಿಪಿಐ ಅವರಿಗೆ ಸೂಚಿಸಲಾಯಿತು. ಅಲ್ಲದೇ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಾಕಿಕೊಳ್ಳಲು ತಿಳಿಸಿದರು. ಜಿಲ್ಲಾ ಬಾಲಕಾಮರ್ಿಕ ಯೋಜನಾ ಸಂಸ್ಥೆಯ ಯೋಜನಾಧಿಕಾರಿ ಸುಧಾಕರ ಬಡಿಗೇರ ಕಾರ್ಯಕ್ರಮದ ರೂಪು ರೇಶೆಗಳ ಬಗ್ಗೆ ಸಭೆಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಬಿ.ಆರ್.ಜಾದವ, ಕಾರ್ಮಿಕ  ನಿರೀಕ್ಷಕ ಅಶೋಕ ಒಡೆಯರ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ ಸೇರಿದಂತೆ ಇತರ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.