ಲೋಕದರ್ಶನ ವರದಿ
ಬಾಗಲಕೋಟೆ 07: ಜಿಲ್ಲೆಯಲ್ಲಿ ಜೂನ್ 11 ರಿಂದ 20 ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಚಟುವಟಿಕೆಗಳು ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಜವಾಬ್ದಾರಿ ವಹಿಸಿ, ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಪೂರ್ವಭಾವಿ ಸಭೆಯ ಅಧ್ಯಕ್ಷತ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಟ್ಟು 8 ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, 6758 ವಿದ್ಯಾಥರ್ಿಗಳು ಪರೀಕ್ಷೆ ಬರೆಯಲಿದ್ದಾರೆ. ಬಾಗಲಕೋಟೆ ಮತ್ತು ಜಮಖಂಡಿಯಲ್ಲಿ ಎರಡು ಪರೀಕ್ಷಾ ಕೇಂದ್ರಗಳಿದ್ದರೆ, ಉಳಿದ ತಾಲೂಕುಗಳಲ್ಲಿ ತಲಾ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಪ್ರಾರಂಭದಿಂದ ಮುಕ್ತಾಯದವರೆಗೆ ಸಿಸಿಟಿವಿ ಕ್ಯಾಮರಾಗಳು ಯಾವುದೇ ಕಾರಣಕ್ಕೂ ಬಂದ್ ಆಗದಂತೆ ನೋಡಿಕೊಳ್ಳಲು ತಿಳಿಸಿದರು.
ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಯಾವುದೇ ಪ್ರತಿಯೊಂದು ವಿದ್ಯಾರ್ಥಿಗಳ ಆಸನದ ವ್ಯವಸ್ಥೆ ಕಲ್ಪಿಸಬೇಕು. ಶಿಸ್ತುಬದ್ದವಾಗಿ ಹಾಗೂ ಕಾನೂನಾತ್ಮಕವಾಗಿ ನಕಲು ರಹಿತವಾಗಿ ಪರೀಕ್ಷೆ ನಡೆಸು ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿ 2 ಜಾಗೃತ ದಳದ ತಂಡಗಳನ್ನು ನೇಮಿಸಲಾಗಿದ್ದು, ಈ ತಂಡವು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ವಹಿಸಲಿದ್ದಾರೆ. ಅಲ್ಲದೆ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದ ಸುತ್ತ ಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿಸಲು 144 ಕಲಂ ಜಾರಿ ಮಾಡಲಾಗುತ್ತಿದೆ ಎಂದರು.
ಪ್ರಶ್ನೆ ಪತ್ರಿಕೆ ವಿತರಕರ ತಂಡವು ಇಲಾಖೆಯಿಂದ ಸರಬರಾಜು ಮಾಡಿದ ಗೌಪ್ಯ ವಸ್ತುಗಳನ್ನು ಖಜಾನೆಯಲ್ಲಿ ಠೇವಣಿಸುವ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಖಜಾನೆಯಲ್ಲಿ ಖುದ್ದಾಗಿ ಹಾಜರಿರಬೇಕು. ಆಯಾ ಪರೀಕ್ಷಾ ದಿನದಂದು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಕಾರ್ಯವಾಗಬೇಕು. ಪರೀಕ್ಷಾ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಗುರುತಿನ ಚೀಟಿ ಹೊಂದಿರಬೇಕು. ಪರೀಕ್ಷಾ ಕೇಂದ್ರದಲ್ಲಿ ಮಾಡಲಾದ ಆಸನದ ವ್ಯವಸ್ಥೆಯ ಬಗ್ಗೆ ಸೂಚನಾ ಫಲಕಗಳಲ್ಲಿ ಅಂಟಿಸಿ ವಿದ್ಯಾರ್ಥಿಗಳ ಗಮನಕ್ಕೆ ತರಬೇಕು ಎಂದರು.
ಪರೀಕ್ಷಾ ಮುಖ್ಯ ಅಧೀಕ್ಷಕರು ಹಾಗೂ ಇತರೆ ಸಿಬ್ಬಂದಿ ವರ್ಗದವರು ತಮಗೆ ನೀಡಿದ ಕೆಲಸವನ್ನು ಜವಾಬ್ದಾರಿಯಿಂದ ನಿಭಾಯಿಸಿ ಪರೀಕ್ಷೆಯಲ್ಲಿ ಯಾವುದೇ ರೀತಿಯ ದುರಾಚರಣೆ ನಡೆಯದಂತೆ ಜಾಗೃತಿ ವಹಿಸಿ. ಅಲ್ಲದೇ ಪರೀಕ್ಷಾ ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಇತರೆ ಸಿಬ್ಬಂದಿ ವರ್ಗದವರು, ವಿದ್ಯಾಥರ್ಿಗಳು ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಫೋನ್, ಇ-ಕ್ಯಾಮರಾ, ಲ್ಯಾಪಟಾಪ್ಗಳನ್ನು ತರುವುದು ಸಂಪೂರ್ಣ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಪರೀಕ್ಷಾ ಬೋರ್ಡನಿಂದ ತಿಳಿಸಲಾದ ಪ್ರತಿಯೊಂದು ಸೂಚನೆಗಳನ್ನು ಚಾಚೂ ತಪ್ಪದೇ ಅನುಸರಿಸಲು ತಿಳಿಸಿದರು.
ಸಭೆಯಲ್ಲಿ ಜಿ.ಪಂ ಉಪಕಾರ್ಯದರ್ಶಿ ದುರ್ಗೇಶ ರುದ್ರಾಕ್ಷಿ, ಉಪವಿಭಾಗಾಧಿಕಾರಿ ಎಚ್.ಜಯಾ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಬಿ.ಎಚ್.ಗೋನಾಳ, ಖಜಾನೆ ಇಲಾಖೆಯ ಉಪನಿರ್ದೇಶಕ ಬಿ.ಎನ್.ಗೋಪಾಲಸ್ವಾಮಿ ಸೇರಿದಂತೆ ತಹಶೀಲ್ದಾರ, ಆಯಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು, ಪ್ರಾರಂಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿದರ್ೇಶಕ ಶಶೀಧರ ಪೂಜಾರಿ ಸ್ವಾಗತಿಸಿ ಕೊನೆಗೆ ವಂದಿಸಿದರು.