ಇಂದು ಕೆ.ಎಲ್.ಇ ಕಾಲೇಜಿನಲ್ಲಿ ಬಹುರೂಪಿ ಡಾ.ಎಸ್.ಎಲ್. ಬೈರ್ಪ ಕಾರ‌್ಯಕ್ರಮ
Bahurupi Dr. S.L. Byrpa program at KLE College today
ಗದಗ 14: ನಗರದ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ವಿಭಾಗವು ಇತ್ತೀಚಿಗೆ ನಮ್ಮನ್ನಗಲಿದ ಹಿರಿಯ ಸಾಹಿತಿ ಕನ್ನಡ ಕಾದಂಬರಿಗಳ ಮಹರ್ಷಿ ಡಾ. ಎಸ್. ಎಲ್. ಬೈರ್ಪನವರ ಕುರಿತಾದ ‘ಬಹುರೂಪಿ ಡಾ. ಎಸ್. ಎಲ್. ಬೈರ್ಪ’ ಕಾರ‌್ಯಕ್ರಮವನ್ನು ಇಂದು (15-11-2025) ಮುಂಜಾನೆ 09.00 ಘಂಟೆಗೆ ಆಯೋಜಿಸಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ, ನವದೆಹಲಿ ನಿರ್ಮಿಸಿರುವ ಹಿರಿಯ ನಿರ್ದೇಶಕ ಪಿ. ಶೇಷಾದ್ರಿ ನಿರ್ದೇಶಿಸಿರುವ ‘ಡಾ. ಎಸ್. ಎಲ್ ಬೈರ್ಪನವರ ಜೀವನ ಮತ್ತು ಕೃತಿಗಳು’ ಸಾಕ್ಷ್ಯಚಿತ್ರ ಪ್ರದರ್ಶನ ಮಾಡಲಾಗುವುದು.
ಹಿರಿಯ ನ್ಯಾಯವಾದಿಗಳಾದ ಸುಧೀಂದ್ರಸಿಂಹ ಘೋರೆ್ಡಯವರು ‘ಡಾ. ಎಸ್. ಎಲ್ ಬೈರ್ಪನವರ ಬದುಕು ಬರಹ’ ವಿಶೇಷ ಉಪನ್ಯಾಸ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನೆಡಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಎ. ಕೆ. ಮಠ ವಹಿಸುವರು ಆಸಕ್ತರು ಭಾಗವಹಿಸಲು ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಅಂದಯ್ಯ ಅರವಟಗಿಮಠ ಕೋರಿಕೊಂಡಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 