ಬಕ್ರೀದ್: ಶಾಂತಿಯುತ ಆಚರಣೆಗೆ ಜಿಲ್ಲಾಡಳಿತ ಸಜ್ಜು
Bakrid: District administration gears up for peaceful celebrations
ಬಳ್ಳಾರಿ 26: ರಂದು ನಗರದಲ್ಲಿ ಮುಂಬರುವ ಬಕ್ರೀದ್ ಹಬ್ಬವನ್ನು ಜಿಲ್ಲೆಯಾದ್ಯಂತ ಶಾಂತಿಯುತ, ಸೌಹಾರ್ದಯುತ ಹಾಗೂ ಕಾನೂನುಬದ್ಧವಾಗಿ ಆಚರಿಸುವ ನಿಟ್ಟಿನಲ್ಲಿ ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಹತ್ವದ ಶಾಂತಿ ಸಭೆಯನ್ನು ಆಯೋಜಿಸಲಾಯಿತು. ಸಭೆಯಲ್ಲಿ ಬಳ್ಳಾರಿ ವಲಯದ ಪೊಲೀಸ್ ಮಹಾನೀರೀಕ್ಷಕರು ಉಪಸ್ಥಿತರಿದ್ದು, ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಮುಸ್ಲಿಂ ಮುಖಂಡರು, ಧಾರ್ಮಿಕ ನಾಯಕರು ಹಾಗೂ ಸಮಾಜದ ಗಣ್ಯರೊಂದಿಗೆ ಸಮಗ್ರ ಚರ್ಚೆ ನಡೆಸಲಾಯಿತು.
ಸಭೆಯ ನೇತೃತ್ವ ವಹಿಸಿದ್ದ ಬಳ್ಳಾರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಸುಮನ್ ಡಿ. ಪೆನ್ನೆಕರ್ ಅವರು ಮಾತನಾಡಿ, ಬಕ್ರೀದ್ ಹಬ್ಬವು ತ್ಯಾಗ, ಸಹೋದರತ್ವ ಮತ್ತು ಮಾನವೀಯ ಮೌಲ್ಯಗಳ ಸಂಕೇತವಾಗಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಮತ್ತಷ್ಟು ಬಲಪಡಿಸುವ ರೀತಿಯಲ್ಲಿ ಆಚರಣೆ ನಡೆಯಬೇಕು ಎಂದು ಹೇಳಿದರು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ಸುಳ್ಳು ಸುದ್ದಿಗಳು, ಪ್ರಚೋದನಕಾರಿ ಸಂದೇಶಗಳು ಹಾಗೂ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಈಗಾಗಲೇ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುತ್ತದೆ. ಹಬ್ಬದ ಸಂದರ್ಭದಲ್ಲಿ ಮೆರವಣಿಗೆ, ಸಾರ್ವಜನಿಕ ಪ್ರಾರ್ಥನೆ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಂತೆ ನಡೆಯಬೇಕೆಂದು ಸೂಚನೆ ನೀಡಿದರು. ಯಾವುದೇ ಸಮಸ್ಯೆ ಅಥವಾ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಭಾಗವಹಿಸಿದ್ದ ಮುಸ್ಲಿಂ ಮುಖಂಡರು ಕೂಡ ಪೊಲೀಸ್ ಇಲಾಖೆಯೊಂದಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಸಮಾಜದಲ್ಲಿ ಶಾಂತಿ, ಸಹಬಾಳ್ವೆ ಮತ್ತು ಸೌಹಾರ್ದತೆಯನ್ನು ಕಾಪಾಡುವಲ್ಲಿ ಸಮುದಾಯದ ಎಲ್ಲರೂ ಕೈಜೋಡಿಸುವುದಾಗಿ ತಿಳಿಸಿದರು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 