ಮೂಡಲಗಿಯಲ್ಲಿ ಬಕ್ರೀದ್ ಹಬ್ಬ ಶ್ರದ್ಧಾಭಕ್ತಿಯಿಂದ ಆಚರಣೆ
Bakrid festival celebrated with devotion in Mudalagi
ಮೂಡಲಗಿ : ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಅಂಗವಾಗಿ ಪಟ್ಟಣದ ಅತ್ತಾರ ಕಲ್ಯಾಣ ಮಂಟಪದಲ್ಲಿ, ಸುನ್ನಿ ಸಮಾಜದ ಮುಸ್ಲಿಮರು ಗುರುವಾರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸುನ್ನಿ ಸಮಾಜದ ಮುಖಂಡ ಮಲ್ಲಿಕಜಾನ ಕಳ್ಳಿಮನಿ ಮಾತನಾಡಿ, ಬಕ್ರೀದ್ ಹಬ್ಬವು ತ್ಯಾಗ ಮತ್ತು ಬಲಿದಾನದ ಪ್ರತೀಕ. ಬಡವರಿಗೆ, ನಿರ್ಗತಿಕರಿಗೆ ದಾನ, ಧರ್ಮ ಮಾಡಲು ಅವಕಾಶ ಮಾಡಿಕೊಡುವುದೇ ಬಕ್ರೀದ್ ಹಬ್ಬದ ವಿಶೇಷತೆ. ಎಲ್ಲರೂ ಕೂಡಿ ಸಹೋದರತೆ, ಸಮಾನತೆ ಹಾಗೂ ಸಹಬಾಳ್ವೆಯಿಂದ ಬದುಕು ನಡೆಸುವ, ಶಾಂತಿ ಸೌಹಾರ್ದತೆಯ ಪ್ರತೀಕವಾಗಿದೆ ಈ ಬಕ್ರೀದ್ ಹಬ್ಬ ಎಂದರು. ಮನುಕುಲಕ್ಕೆ ಶಾಂತಿ ನೀಡಲಿ, ಮಳೆಯಾಗಲಿ, ಬೆಳೆಯಾಗಲಿ. ಶಾಂತಿ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ.
ಬೇರೆಯವರ ಬಗ್ಗೆ ಇರುವ ಕೆಡಕನ್ನು ನಾವೆಲ್ಲಾ ತ್ಯಾಗ ಮಾಡಬೇಕಾಗಿದೆ ಎಂದರು.ಬಕ್ರೀದ್ ಹಬ್ಬವು ಸಮಾಜದಲ್ಲಿ ಶಾಂತಿ, ಸಮೃದ್ಧಿ ನೆಲೆಸುವಂತೆ ಮಾಡಲಿ, ಎಲ್ಲರೂ ಕೂಡಿ ಬಾಳುವಂತಾಗಲಿ, ಉತ್ತಮ ಮಳೆ, ಬೆಳೆಯಾಗಿ ದೇಶ ಸಮೃದ್ಧಿಯಾಗಲಿ ಎಂದು ಆಶಿಸಿದರು.ಈ ಸಂದರ್ಭದಲ್ಲಿ ಮೂಡಲಗಿ ತಹಸೀಲ್ದಾರ್ ಶ್ರೀಶೈಲ್ ಗುಡಮೆ, ಪ್ರೊಬೆಷನರಿ ಪಿಎಸ್ಐ ರಾಜು ಪೂಜಾರ, ಪುರಸಭೆ ಮಾಜಿ ಅಧ್ಯಕ್ಷರಾದ ಹಣಮಂತ ಗುಡ್ಲಮನಿ, ಸಂತೋಷ ಸೋನವಾಲಕರ, ಮತ್ತು ಲಕ್ಷ್ಮಣ ಗುಡೇರ, ಮದಾರ ಮುಗಟಖಾನ, ಇಮಾಮಹುಸೇನ್ ಮುಲ್ಲಾ, ಮಲ್ಲಿಕಸಬಾ ಅತ್ತಾರ, ದಸ್ತಾಗೀರ ನಾಧಪ್, ಮಹಿಬುಬೂ ಥರಥರಿ, ಪಕರುಸಬಾ ದಬಾಡಿ, ಮೀರಾಸಬಾ ನಿಡಗುಂದಿ, ಇಬ್ರಾಹಿಂ ಅತ್ತಾರ ಸೇರಿದಂತೆ ಅನೇಕ ಸುನ್ನಿ ಸಮಾಜದ ಜನರು ಭಾಗವಹಿಸಿದರು
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ
ಕೆಪಿಸಿಸಿ ಮಾಜಿ ಸದಸ್ಯ, ವೈದ್ಯ ಡಾ. ಡಿ.ಎಚ್.ಮಾಲದಾರ ವಿಧಿವಶ
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ 