ಬಕ್ರೀದ್ ಹಬ್ಬದ ಶಾಂತಿ ಸಭೆ
Bakrid festival peace meeting
ಬಳ್ಳಾರಿ 03: ಕುರುಗೋಡು ತಾಲೂಕಿನಲ್ಲಿ ಶಾಂತಿ ಕದಡುವ ಪ್ರಯತ್ನವನ್ನು ಸಹಿಸುವುದಿಲ್ಲ. ಕೋಮುದ್ವೇಷ ಹರಡುವ ಹಾಗೂ ಹಿಂಸೆಗೆ ಪ್ರಚೋದನೆ ನೀಡುವವರ ಮೇಲೆ ನಿಗಾ ಇಡಲಾಗಿದೆ. ಇಂತಹವರ ವಿರುದ್ಧ ಗೂಂಡಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ವಿಶ್ವನಾಥ ಹೀರೆಗೌಡ ಎಚ್ಚರಿಕೆ ನೀಡಿದ್ದಾರೆ.
ಹಾಗೂ ಜೂನ್ 7 ರ ಬಕ್ರೀದ್ ಹಬ್ಬದ ಅಂಗವಾಗಿ ಕುರುಗೋಡು ತಾಲೂಕಿನ ಪೊಲೀಸ್ ಠಾಣೆಯಲ್ಲು ಮಂಗಳವಾರ ಮುಖಂಡರ ಸೌಹಾರ್ದ ಸಭೆ ನಡೆಯಿತು. ಸಂಚಾರ ನಿಯಮ ಉಲ್ಲಂಘನೆ, ಸ್ವಚ್ಛತೆ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಚರ್ಚೆ ನಡೆಯಿತು.ಸಾಮಾಜಿಕ ಜಾಲತಾಣದಲ್ಲಿ ಹರಡುವ ವದಂತಿ ಸವಾಲಾಗಿ ಪರಿಣಮಿಸುತ್ತಿದೆ. ವಾಸ್ತವ ತಿರುಚಿ ಸಂದೇಶ ರವಾನಿಸುವ ಯುವಸಮೂಹ ಸಮಸ್ಯೆಗೆ ಸಿಲುಕುತ್ತಿದೆ. ಸಾಮಾಜಿಕ ಜಾಲತಾಣದ ಮೇಲೆ ನಿಗಾ ಇಡಲಾಗಿದ್ದು, ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ’ ಎಂದು ಪಿಎಸ್ ಐ ಸುಪ್ರೀತ್ ವಿರುಪಾಕ್ಷಪ್ಪ ಹೇಳಿದರು.ಹಬ್ಬದಲ್ಲಿ ಸಂಚಾರ ನಿಯಮವನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಹಬ್ಬದ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ನಿಗದಿಗಿಂತ ಹೆಚ್ಚು ಜನರು ಸಂಚರಿಸಲು ಅವಕಾಶವಿಲ್ಲ. ಸಂಚಾರ ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ. ಮಾದಕ ದ್ರವ್ಯ ಕಳ್ಳಸಾಗಣೆ, ಮಾರಾಟ ಕಂಡುಬಂದರೆ ಮಾಹಿತಿ ನೀಡಿ’ ಎಂದು ಮನವಿ ಮಾಡಿದರು.
‘ತ್ಯಾಗ ಮತ್ತು ಸೌಹಾರ್ದ ಸಂಕೇತದ ಹಬ್ಬ ಬಕ್ರೀದ್. ಪ್ರೀತಿ, ಸಹೋದರತ್ವ ಸಾರಲು ಈ ಹಬ್ಬ ಮಾಡಲಾಗುತ್ತದೆ. ಬೇರೆ ಧರ್ಮೀಯರ ಭಾವನೆಗೆ ಧಕ್ಕೆ ಬಾರದ ರೀತಿಯಲ್ಲಿ ಬಕ್ರಿದ್ ಹಬ್ಬ ಆಚರಣೆ ಮಾಡುವ ಅಗತ್ಯ ಇದೆ’ ಎಂದು ಮುಸ್ಲಿಂ ಸಮುದಾಯದ ಮುಖಂಡರು ಹೇಳಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 