ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಸಂಭ್ರಮದ ಬಕ್ರೀದ್
Bakrid is a celebration in the taluk including the town
ಲೋಕದರ್ಶನ ವರದಿ
ಕಂಪ್ಲಿ 28: ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಗುರುವಾರ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಿದರು. ಈದ್ಗಾ ಮೈದಾನಗಳಲ್ಲಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಹೊಸ ಉಡುಪುಗಳಲ್ಲಿ ಕಂಗೊಳಿಸಿದ ಪುಟಾಣಿ ಮಕ್ಕಳು ಕೂಡ ಪರಸ್ಪರ ಅಪ್ಪಿ ಬಕ್ರೀದ್ ಶುಭಾಶಯ ವಿನಿಯಮ ಮಾಡಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಪಟ್ಟಣದ ಹೊಸ ಬಸ್ ನಿಲ್ದಾಣ ಬಳಿಯ ಮುದ್ದಾಪುರ ಅಗಸಿಯ ಕದಿಂ(ಸುನ್ನಿ)ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ನಂತರ ಮುಸ್ಲಿಂ ಧರ್ಮಗುರು ಸೈಯದ್ ಷಾ ಅಬುಲ್ ಹಸನ್ ಖಾದ್ರಿ ಅವರು ಪ್ರವಚನ ನೀಡಿ ಮಾತನಾಡಿ, ಬದುಕಿನಲ್ಲಿ ನಮಾಜ್, ಹಜ್, ರೋಜಾ, ಜಕಾತ, ಸಿತ್ರಾ ಈ ಪಂಚ ಸೂತ್ರಗಳನ್ನು ಪಾಲಿಸಿದಾಗ ಮಾತ್ರ ಅಲ್ಲಾಹನ ಕೃಪೆಗೆ ಪಾತ್ರರಾಗಿ ಮೋಕ್ಷ ಪಡೆಯಲು ಸಾಧ್ಯ. ಬದುಕಿನ ಸನ್ಮಾರ್ಗವನ್ನು ತೋರುವ, ಮಾನ ವೀಯತೆಯ ಸಂದೇಶವನ್ನು ಸಾರುವ ಬಕ್ರೀದ್ ಹಬ್ಬವನ್ನು ಪ್ರತಿ ವರ್ಷದಂತೆ ಈ ವರ್ಷವು ಸಂಭ್ರಮದಿಂದ ಆಚರಿಸಲಾಯಿತು ಎಂದರು.
ಈ ಸಂದರ್ಭದಲ್ಲಿ ಈದ್ಗಾ ಕಮಿಟಿ ಅಧ್ಯಕ್ಷ ಎಂ.ಇಸ್ಮಾಯಿಲ್, ಉಪಾಧ್ಯಕ್ಷ ಮೆಹಮೂಬ್, ಕಾರ್ಯದರ್ಶಿ ಬಿ.ಜಾಫರ್ ಸಾದೀಕ್, ಖಜಾಂಚಿ ಕರೀಂ ಲೊಡ್ಡು, ಸದಸ್ಯರಾದ ನೂರ್ ಅಹ್ಮದ್, ಆಸೀಫ್, ನಜೀರ್, ಖಲೀಲ್, ರಿಯಾಜ್, ಮಾಹಾಬಾಷಾ, ಮೈನುದ್ದೀನ್, ಮುಖಂಡರಾದ ಮೆಹಮೂದ್, ಶಬ್ಬೀರ್, ಕೆ.ಮೆಹಬೂಬ್, ಜಿಲಾನ್ ಸಾಬ್ ಸೇರಿದಂತೆ ಎಲ್ಲಾ ಮಸೀದಿಗಳ ಮುತುವಲಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 