ಸ್ವಾತಂತ್ರ್ಯ ಹೋರಾಟದಲ್ಲಿ ಬಳ್ಳಾರಿಯ ಕೊಡುಗೆ ಅನನ್ಯ: ಬಿ. ನಾಗೇಂದ್ರ

ಸ್ವಾತಂತ್ರ್ಯ ಹೋರಾಟದಲ್ಲಿ ಬಳ್ಳಾರಿಯ ಕೊಡುಗೆ ಅನನ್ಯ: ಬಿ. ನಾಗೇಂದ್ರ  Ballari's contribution to the freedom struggle is unique: B. Nagendra

ಲೋಕದರ್ಶನ ವರದಿ 

ಬಳ್ಳಾರಿ, ಆ.16: ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಬಳ್ಳಾರಿ ಜಿಲ್ಲೆಯ ಕೊಡುಗೆ ಅಪಾರ ಹಾಗೂ ಅವಿಸ್ಮರಣೀಯವಾಗಿದೆ. ಬ್ರಿಟಿಷರ ಆಡಳಿತದ ವಿರುದ್ಧ ಹೋರಾಟದ ಕಿಚ್ಚು ಹೊತ್ತಿಸಿದ ಐತಿಹಾಸಿಕ ನೆಲ ಬಳ್ಳಾರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಹೇಳಿದರು.  ನಗರದ ಬಿಎಂಎಸ್‌ಆರ್ಸಿ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ 1921ರಲ್ಲಿ ಬಳ್ಳಾರಿಗೆ ಭೇಟಿ ನೀಡಿದ್ದನ್ನು ಹಾಗೂ ಸಂಡೂರಿನ ಯಶವಂತರಾವ್ ಹಿಂದೂರಾವ್ ಘೋರೆ​‍್ಡ ಅವರು ಹರಿಜನರಿಗೆ ದೇವಾಲಯ ಪ್ರವೇಶ ಕಲ್ಪಿಸಿ ಅಸ್ಪೃಶ್ಯತೆ ನಿವಾರಣೆಗೆ ಮುನ್ನುಡಿ ಬರೆದಿದ್ದನ್ನು ಸ್ಮರಿಸಿದರು. ಅಲಿಪುರ ಜೈಲಿನಲ್ಲಿ ಸಿ. ರಾಜಗೋಪಾಲಾಚಾರಿ ಸೇರಿದಂತೆ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಸೆರೆವಾಸ  

ಬರ ಪರಿಸ್ಥಿತಿ ಎದುರಿಸಲು ಕ್ರಮ  

ಮುಂಗಾರು ಮಳೆ ಕೊರತೆಯಿಂದ ಜಿಲ್ಲೆಯಲ್ಲಿ 1,59,542 ಹೆಕ್ಟೇರ್ ಬಿತ್ತನೆ ಗುರಿಯ ಪೈಕಿ ಶೇ.42ರಷ್ಟು ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಬಳ್ಳಾರಿ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ.  

ತುಂಗಭದ್ರಾ ಜಲಾಶಯದಲ್ಲಿ 90 ಟಿಎಂಸಿ ನೀರು ಸಂಗ್ರಹವಿದ್ದು, ಕುಡಿಯುವ ನೀರು ಮತ್ತು ಕೃಷಿಗೆ ಸಮರ​‍್ಕವಾಗಿ ಬಳಸಲು ಆದ್ಯತೆ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಖಾಸಗಿ ಬೋರ್ವೆಲ್ಗಳನ್ನು ಗುರುತಿಸಲಾಗಿದೆ. ಜಾನುವಾರುಗಳಿಗಾಗಿ 40 ಸಾವಿರ ಮೇವಿನ ಮಿನಿಕಿಟ್ಗಳಿಗೆ ಬೇಡಿಕೆ ಸಲ್ಲಿಸಲಾಗಿದೆ.  

ಅಭಿವೃದ್ಧಿಗೆ 2,000 ಕೋಟಿಗೂ ಅಧಿಕ ಅನುದಾನ  

ಕರ್ನಾಟಕ ಗಣಿಗಾರಿಕೆ ಪರಿಸರ ಪುನಶ್ಚೇತನ ನಿಗಮದ ಮೂಲಕ ಬಳ್ಳಾರಿ ಜಿಲ್ಲೆಯ ಗಣಿಪೀಡಿತ ಪ್ರದೇಶಗಳ ಅಭಿವೃದ್ಧಿಗೆ ?2,000 ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಬಿಎಂಎಸ್‌ಆರ್ಸಿ ಆಸ್ಪತ್ರೆಯಲ್ಲಿ ?331 ಕೋಟಿ ವೆಚ್ಚದಲ್ಲಿ 200 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆ ಹಾಗೂ ಲೀನಿಯರ್ ಆಕ್ಸಿಲರೇಟರ್ ಸ್ಥಾಪನೆ, ಸಂಡೂರಿನಲ್ಲಿ 250 ಹಾಸಿಗೆಗಳ ಆಸ್ಪತ್ರೆ ಮತ್ತು ರಕ್ತ ಬ್ಯಾಂಕ್ ಸೇರಿದಂತೆ ಹಲವು ಯೋಜನೆಗಳು ಪ್ರಗತಿಯಲ್ಲಿವೆ.  

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ 36 ವಸತಿ ನಿಲಯಗಳು, 243 ಶಾಲೆಗಳ ಉನ್ನತೀಕರಣ, 1.3 ಲಕ್ಷ ಮಕ್ಕಳಿಗೆ ಪೌಷ್ಟಿಕ ಆಹಾರ, ಗ್ರಾಮೀಣ ಸಂಪರ್ಕ ರಸ್ತೆಗಳು, ಕೆರೆಗಳ ಪುನಶ್ಚೇತನ, ವಸತಿ ಹಾಗೂ ಅಂಗನವಾಡಿ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.  

ಯುವಶಕ್ತಿ ಮತ್ತು ಉದ್ಯೋಗಕ್ಕೆ ಆದ್ಯತೆ  

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ ಮತ್ತು ಸಾಮಾಜಿಕ ಸಾಮರಸ್ಯ ಬೆಳೆಸಲು ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್ಗಳಲ್ಲಿ 10,000 ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುವುದು. ಪ್ರತಿ ಸಂಘಕ್ಕೆ ?10 ಲಕ್ಷದಂತೆ ಒಟ್ಟು ?1,000 ಕೋಟಿ ಅನುದಾನ ನೀಡಲಾಗುವುದು ಎಂದು ಸಚಿವರು ತಿಳಿಸಿದರು.  

ಬಳ್ಳಾರಿಯಲ್ಲಿ ಅಪರೆಲ್ ಜೀನ್ಸ್‌ ಪಾರ್ಕ್‌ ಸ್ಥಾಪನೆಗೆ ಕೆಐಎಡಿಬಿ ಮೂಲಕ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ. ಸಂಡೂರು ತಾಲೂಕಿನಲ್ಲಿ ಮೆಗಾ ಸ್ಕಿಲ್ ಅಕಾಡೆಮಿ ಸ್ಥಾಪನೆ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗುತ್ತಿದೆ.  

ಪ್ರಜಾಸೇವೆ ಆಂದೋಲನ  

ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ಪ್ರತಿ ತಿಂಗಳ ಶನಿವಾರ ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಆಡಳಿತವನ್ನು ಜನರ ಮನೆಬಾಗಿಲಿಗೆ ತಲುಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವರು ಹೇಳಿದರು.  

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು. ಬಳಿಕ ಬಿಎಂಎಸ್‌ಆರ್ಸಿ ಕ್ರೀಡಾಂಗಣದಲ್ಲಿ ಪೊಲೀಸ್ ಪಡೆ, ಗೃಹರಕ್ಷಕ ದಳ, ಎನ್ಸಿಸಿ, ಸ್ಕೌಟ್ಸ್‌ ಮತ್ತು ಗೈಡ್ಸ್‌ ಹಾಗೂ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ನಡೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.