ಬಳ್ಳಾರಿ: ಸಚಿವ ಬಿ. ನಾಗೇಂದ್ರ ಪರ ಕಾಂಗ್ರೆಸ್ನಿAದ ಬೃಹತ್ ಪ್ರತಿಭಟನೆ

ಬಳ್ಳಾರಿ: ಸಚಿವ ಬಿ. ನಾಗೇಂದ್ರ ಪರ ಕಾಂಗ್ರೆಸ್ನಿAದ ಬೃಹತ್ ಪ್ರತಿಭಟನೆ Ballari: Massive protest by Congress in support of Minister B. Nagendra.

ಬಳ್ಳಾರಿ, ಆ.೨೪: ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಾಗೂ ರಾಜಕೀಯ ಆರೋಪಗಳನ್ನು ಖಂಡಿಸಿ, ಸಚಿವರ ಪರ ಬೆಂಬಲ ವ್ಯಕ್ತಪಡಿಸಲು ಕಾಂಗ್ರೆಸ್ ವತಿಯಿಂದ ಸೋಮವಾರ ನಗರದಲ್ಲಿ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಯಿತು. 

ನಗರದ ಇಂದಿರಾ ಗಾಂಧಿ ವೃತ್ತದಿಂದ ಆರಂಭವಾದ ಕಾಂಗ್ರೆಸ್ನ ಬೃಹತ್ ಪಾದಯಾತ್ರೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಚಿವ ಬಿ. ನಾಗೇಂದ್ರ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾಂಗ್ರೆಸ್ ಧ್ವಜಗಳನ್ನು ಹಿಡಿದು ಸಾಗಿದ ಕಾರ್ಯಕರ್ತರು ನಗರದ ಪ್ರಮುಖ ವೃತ್ತವಾದ ರಾಯಲ್ ಸರ್ಕಲ್ನಲ್ಲಿ ಸಚಿವರ ಪರ ಘೋಷಣೆಗಳನ್ನು ಕೂಗಿದರು. 

ಪಾದಯಾತ್ರೆಯು ನಗರದ ಹಳೆ ಜಿಲ್ಲಾಧಿಕಾರಿ ಕಚೇರಿ ಆವರಣದ ಮುಂಭಾಗದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿಗೆ ತಲುಪಿದ ಬಳಿಕ ಪ್ರತಿಭಟನೆ ನಡೆಸಲಾಯಿತು. 

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಹಾಗೂ ಮಾಡುತ್ತಿರುವ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಆರೋಪಿಸಿದರು. 

ಆರೋಪಗಳು ನಿರಾಧಾರ: ಕಾಂಗ್ರೆಸ್ 

ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು, ಸಚಿವ ಬಿ. ನಾಗೇಂದ್ರ ಯಾವುದೇ ತಪ್ಪು ಮಾಡಿಲ್ಲ. ಅವರ ವಿರುದ್ಧ ಬಿಜೆಪಿ ಮಾಡುತ್ತಿರುವ ಆರೋಪಗಳು ನಿರಾಧಾರವಾಗಿದ್ದು, ರಾಜಕೀಯ ದುರುದ್ದೇಶದಿಂದ ಸಚಿವರನ್ನು ಗುರಿಯಾಗಿಸಿಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು. 

ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಚಿವರು ಕಾರ್ಯನಿರ್ವಹಿಸುತ್ತಿದ್ದು, ಅವರ ಜನಪ್ರಿಯತೆಯನ್ನು ಕುಗ್ಗಿಸುವ ಉದ್ದೇಶದಿಂದ ಬಿಜೆಪಿ ರಾಜಕೀಯ ಆರೋಪಗಳನ್ನು ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. 

ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗಳಿಗೆ ತಿರುಗೇಟು ನೀಡಲು ಕಾಂಗ್ರೆಸ್ ಕಾರ್ಯಕರ್ತರು ಸಜ್ಜಾಗಿದ್ದಾರೆ. ಸಚಿವ ಬಿ. ನಾಗೇಂದ್ರ ಅವರ ಪರವಾಗಿ ಕಾಂಗ್ರೆಸ್ ಪಕ್ಷ ಹಾಗೂ ಕಾರ್ಯಕರ್ತರು ಒಗ್ಗಟ್ಟಾಗಿ ನಿಲ್ಲಲಿದ್ದಾರೆ ಎಂಬ ಸಂದೇಶವನ್ನು ಪ್ರತಿಭಟನೆಯ ಮೂಲಕ ಸಾರಿದರು. 

ಬಿಜೆಪಿ ವಿರುದ್ಧ ಕಾಂಗ್ರೆಸ್ ಮುಖಂಡರ ವಾಗ್ದಾಳಿ 

ಪ್ರತಿಭಟನೆಯಲ್ಲಿ ಮಾತನಾಡಿದ ಬುಡಾ ಅಧ್ಯಕ್ಷ ಆಂಜನೇಯಲು, ಬಿಜೆಪಿ ನಾಯಕರು ಸಚಿವ ನಾಗೇಂದ್ರ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಸಚಿವರ ವಿರುದ್ಧ ಈಗಾಗಲೇ ‘ಕ್ಲೀನ್ ಚಿಟ್’ ನೀಡಲಾಗಿದೆ ಎಂದು ಹೇಳಿದ ಅವರು, ಪದೇಪದೇ ಆರೋಪಗಳನ್ನು ಮಾಡುವ ಮೂಲಕ ಸತ್ಯವನ್ನು ಬದಲಿಸಲು ಸಾಧ್ಯವಿಲ್ಲ ಎಂದರು. 

ಈ ವೇಳೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ಹಿಂದಿನ ಅವಧಿಯ ಆಡಳಿತಕ್ಕೆ ಸಂಬAಧಿಸಿದ ವಿವಿಧ ಆರೋಪಗಳನ್ನು ಪ್ರಸ್ತಾಪಿಸಿದರು. ಬಿಜೆಪಿ ನಾಯಕರು ತಮ್ಮ ರಾಜಕೀಯ ಆರೋಪಗಳಿಗೆ ಸೂಕ್ತ ಉತ್ತರ ನೀಡಬೇಕು ಎಂದು ಆಗ್ರಹಿಸಿದರು. 

ಪ್ರತಿಭಟನೆಯಲ್ಲಿ ಹುಮಾಯೂನ್ ಖಾನ್, ಮಂಜುಳಾ ಬೋಳೆಪಾಟಿ, ವಿಷ್ಣು, ಈರನಗೌಡ ಹ್ಯಾಳಪ್ಪ, ದಿವಾಕರ್ ಗೌಡ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.