ಬಳ್ಳಾರಿ ಚಲೋ: ಮೊದಲ ಹಂತದ ಹೋರಾಟಕ್ಕೆ ನಾಳೆ ತೆರೆ
Ballari Chalo: First phase of the agitation to conclude tomorrow
ಬಳ್ಳಾರಿ, ಸೆ.10 (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಹಾಗೂ ಜನವಿರೋಧಿ ನೀತಿಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ‘ಬಳ್ಳಾರಿ ಚಲೋ’ ಪಾದಯಾತ್ರೆ ನಾಳೆ ಅಂತಿಮ ಹಂತ ತಲುಪಲಿದೆ.
ಮಾಧ್ಯಮಗಳ ಸಹಕಾರ, ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಜನಸಾಮಾನ್ಯರ ಬೆಂಬಲದಿಂದ ಪಾದಯಾತ್ರೆ ಯಶಸ್ವಿಯಾಗಿ ನಡೆದಿದೆ ಎಂದು ವಿಜಯೇಂದ್ರ ಹೇಳಿದರು.
ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಸುಮಾರು 9 ಕಿ.ಮೀ. ಪಾದಯಾತ್ರೆ ನಡೆಸಿ ವಾಲ್ಮೀಕಿ ವೃತ್ತ ತಲುಪಿದ್ದು, ನಾಳೆ ಬೆಳಗ್ಗೆ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ, ಮಧ್ಯಾಹ್ನ ವಾಲ್ಮೀಕಿ ವೃತ್ತದಿಂದ ಸಮಾವೇಶದ ಸ್ಥಳದತ್ತ ಪಾದಯಾತ್ರೆ ಮುಂದುವರಿಯಲಿದೆ. ಸಂಜೆ 4.30ಕ್ಕೆ ವೇದಿಕೆ ಕಾರ್ಯಕ್ರಮ ಆರಂಭವಾಗಲಿದೆ ಎಂದರು.
ನಾಳಿನ ಬೃಹತ್ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರ್ಪ, ಬಸವರಾಜ ಬೊಮ್ಮಾಯಿ, ಜಗದೀಶ ಶೆಟ್ಟರ್, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ರಾಜ್ಯದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
‘ಬಳ್ಳಾರಿ ಚಲೋ’ ಪಾದಯಾತ್ರೆಯ ಮೊದಲ ಹಂತ ನಾಳೆ ಮುಕ್ತಾಯವಾಗಲಿದೆ. ಆದರೆ ಇದು ಹೋರಾಟದ ಅಂತ್ಯವಲ್ಲ. ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಪರ ಹೋರಾಟ ನಿರಂತರವಾಗಿ ಮುಂದುವರಿಯಲಿದೆ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 